ಧರ್ಮೋಪದೇಶಕಾಂಡ 32 : 1 (IRVKN)
ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. [QBR] ಭೂಮಂಡಲವೇ, ನಾನು ಹೇಳುವುದನ್ನು ಕೇಳು. [QBR]
ಧರ್ಮೋಪದೇಶಕಾಂಡ 32 : 2 (IRVKN)
ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; [QBR] ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು. [QBR]
ಧರ್ಮೋಪದೇಶಕಾಂಡ 32 : 3 (IRVKN)
ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು. [QBR]
ಧರ್ಮೋಪದೇಶಕಾಂಡ 32 : 4 (IRVKN)
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; [QBR] ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ. [QBR]
ಧರ್ಮೋಪದೇಶಕಾಂಡ 32 : 5 (IRVKN)
ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು. [QBR]
ಧರ್ಮೋಪದೇಶಕಾಂಡ 32 : 6 (IRVKN)
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? [QBR] ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ. [QBR]
ಧರ್ಮೋಪದೇಶಕಾಂಡ 32 : 7 (IRVKN)
ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. [QBR] ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು. [QBR]
ಧರ್ಮೋಪದೇಶಕಾಂಡ 32 : 8 (IRVKN)
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ [QBR] ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು. [QBR]
ಧರ್ಮೋಪದೇಶಕಾಂಡ 32 : 9 (IRVKN)
ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು. [QBR]
ಧರ್ಮೋಪದೇಶಕಾಂಡ 32 : 10 (IRVKN)
ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ [QBR] ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. [QBR] ಪ್ರೀತಿಯಿಂದ ಪರಾಂಬರಿಸಿದ ಹಾಗೂ ಕಣ್ಣುಗುಡ್ಡೆಯಂತೆ ಕಾಪಾಡಿದನು. [QBR]
ಧರ್ಮೋಪದೇಶಕಾಂಡ 32 : 11 (IRVKN)
ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, [QBR] ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು. [QBR]
ಧರ್ಮೋಪದೇಶಕಾಂಡ 32 : 12 (IRVKN)
ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು. [QBR]
ಧರ್ಮೋಪದೇಶಕಾಂಡ 32 : 13 (IRVKN)
ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ [QBR] ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, [QBR] ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು. [QBR]
ಧರ್ಮೋಪದೇಶಕಾಂಡ 32 : 14 (IRVKN)
ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, [QBR] ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; [QBR] ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.” [QBR]
ಧರ್ಮೋಪದೇಶಕಾಂಡ 32 : 15 (IRVKN)
ಆದರೆ [* ಯಥಾರ್ಥತೆಯುಳ್ಳವನು.] ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, [QBR] ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು. [QBR]
ಧರ್ಮೋಪದೇಶಕಾಂಡ 32 : 16 (IRVKN)
ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; [QBR] ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. [QBR]
ಧರ್ಮೋಪದೇಶಕಾಂಡ 32 : 17 (IRVKN)
ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ [QBR] ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ [QBR] ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು. [QBR]
ಧರ್ಮೋಪದೇಶಕಾಂಡ 32 : 18 (IRVKN)
ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; [QBR] ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ. [QBR]
ಧರ್ಮೋಪದೇಶಕಾಂಡ 32 : 19 (IRVKN)
ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; [QBR] ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು. [QBR]
ಧರ್ಮೋಪದೇಶಕಾಂಡ 32 : 20 (IRVKN)
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, [QBR] “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. [QBR] ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ. [QBR]
ಧರ್ಮೋಪದೇಶಕಾಂಡ 32 : 21 (IRVKN)
ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. [QBR] ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ [QBR] ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು. [QBR]
ಧರ್ಮೋಪದೇಶಕಾಂಡ 32 : 22 (IRVKN)
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ [QBR] ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. [QBR]
ಧರ್ಮೋಪದೇಶಕಾಂಡ 32 : 23 (IRVKN)
ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; [QBR] ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು. [QBR]
ಧರ್ಮೋಪದೇಶಕಾಂಡ 32 : 24 (IRVKN)
ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; [QBR] ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು. [QBR]
ಧರ್ಮೋಪದೇಶಕಾಂಡ 32 : 25 (IRVKN)
ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. [QBR] ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು [QBR] ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. [QBR]
ಧರ್ಮೋಪದೇಶಕಾಂಡ 32 : 26 (IRVKN)
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, [QBR] ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು. [QBR]
ಧರ್ಮೋಪದೇಶಕಾಂಡ 32 : 27 (IRVKN)
ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, [QBR] ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ. [QBR]
ಧರ್ಮೋಪದೇಶಕಾಂಡ 32 : 28 (IRVKN)
ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ. [QBR]
ಧರ್ಮೋಪದೇಶಕಾಂಡ 32 : 29 (IRVKN)
ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು! [QBR]
ಧರ್ಮೋಪದೇಶಕಾಂಡ 32 : 30 (IRVKN)
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ [QBR] ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? [QBR] ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು? [QBR]
ಧರ್ಮೋಪದೇಶಕಾಂಡ 32 : 31 (IRVKN)
ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ. [QBR]
ಧರ್ಮೋಪದೇಶಕಾಂಡ 32 : 32 (IRVKN)
ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; [QBR] ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. [QBR] ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; [QBR] ಅದರ ಗೊಂಚಲು ಕಹಿ. [QBR]
ಧರ್ಮೋಪದೇಶಕಾಂಡ 32 : 33 (IRVKN)
ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು. [QBR]
ಧರ್ಮೋಪದೇಶಕಾಂಡ 32 : 34 (IRVKN)
ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ? [QBR]
ಧರ್ಮೋಪದೇಶಕಾಂಡ 32 : 35 (IRVKN)
ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; [QBR] ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; [QBR] ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು. [QBR]
ಧರ್ಮೋಪದೇಶಕಾಂಡ 32 : 36 (IRVKN)
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. [QBR] ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ [QBR] ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು. [QBR]
ಧರ್ಮೋಪದೇಶಕಾಂಡ 32 : 37 (IRVKN)
ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, [QBR] “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? [QBR] ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ? [QBR]
ಧರ್ಮೋಪದೇಶಕಾಂಡ 32 : 38 (IRVKN)
ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು [QBR] ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? [QBR] ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ. [QBR]
ಧರ್ಮೋಪದೇಶಕಾಂಡ 32 : 39 (IRVKN)
ನಾನೇ, ನಾನೊಬ್ಬನೇ ದೇವರಾಗಿರಲಾಗಿ [QBR] ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. [QBR] ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; [QBR] ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ. [QBR]
ಧರ್ಮೋಪದೇಶಕಾಂಡ 32 : 40 (IRVKN)
ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ [QBR] ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು, [QBR]
ಧರ್ಮೋಪದೇಶಕಾಂಡ 32 : 41 (IRVKN)
‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, [QBR] ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, [QBR] ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; [QBR]
ಧರ್ಮೋಪದೇಶಕಾಂಡ 32 : 42 (IRVKN)
ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; [QBR] ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ [QBR] ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ. [QBR]
ಧರ್ಮೋಪದೇಶಕಾಂಡ 32 : 43 (IRVKN)
ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. [QBR] ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; [QBR] ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ. [QBR]
ಧರ್ಮೋಪದೇಶಕಾಂಡ 32 : 44 (IRVKN)
ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.” [PS]
ಧರ್ಮೋಪದೇಶಕಾಂಡ 32 : 45 (IRVKN)
{ಮೋಶೆಯ ಅಂತಿಮ ಬೋಧನೆ} [PS] ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,
ಧರ್ಮೋಪದೇಶಕಾಂಡ 32 : 46 (IRVKN)
ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
ಧರ್ಮೋಪದೇಶಕಾಂಡ 32 : 47 (IRVKN)
ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು. [PS]
ಧರ್ಮೋಪದೇಶಕಾಂಡ 32 : 48 (IRVKN)
{ಮೋಶೆಗೆ ಯೆಹೋವನ ಆಜ್ಞೆ} [PS] ಆದೇ ದಿನ ಯೆಹೋವನು ಮೋಶೆಗೆ,
ಧರ್ಮೋಪದೇಶಕಾಂಡ 32 : 49 (IRVKN)
“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
ಧರ್ಮೋಪದೇಶಕಾಂಡ 32 : 50 (IRVKN)
ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.
ಧರ್ಮೋಪದೇಶಕಾಂಡ 32 : 51 (IRVKN)
ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
ಧರ್ಮೋಪದೇಶಕಾಂಡ 32 : 52 (IRVKN)
ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52

BG:

Opacity:

Color:


Size:


Font: