ಧರ್ಮೋಪದೇಶಕಾಂಡ 8 : 1 (IRVKN)
ಸ್ಮರಿಸಿರಿ ಮತ್ತು ವಿಧೇಯರಾಗಿರಿ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
ಧರ್ಮೋಪದೇಶಕಾಂಡ 8 : 2 (IRVKN)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
ಧರ್ಮೋಪದೇಶಕಾಂಡ 8 : 3 (IRVKN)
ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
ಧರ್ಮೋಪದೇಶಕಾಂಡ 8 : 4 (IRVKN)
ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
ಧರ್ಮೋಪದೇಶಕಾಂಡ 8 : 5 (IRVKN)
ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.
ಧರ್ಮೋಪದೇಶಕಾಂಡ 8 : 6 (IRVKN)
ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
ಧರ್ಮೋಪದೇಶಕಾಂಡ 8 : 7 (IRVKN)
ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
ಧರ್ಮೋಪದೇಶಕಾಂಡ 8 : 8 (IRVKN)
ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
ಧರ್ಮೋಪದೇಶಕಾಂಡ 8 : 9 (IRVKN)
ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
ಧರ್ಮೋಪದೇಶಕಾಂಡ 8 : 10 (IRVKN)
ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
ಧರ್ಮೋಪದೇಶಕಾಂಡ 8 : 11 (IRVKN)
ದೇವರನ್ನು ಮರೆಯಬಾರದೆಂಬ ಎಚ್ಚರಿಕೆ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
ಧರ್ಮೋಪದೇಶಕಾಂಡ 8 : 12 (IRVKN)
ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,
ಧರ್ಮೋಪದೇಶಕಾಂಡ 8 : 13 (IRVKN)
ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ,
ಧರ್ಮೋಪದೇಶಕಾಂಡ 8 : 14 (IRVKN)
ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
ಧರ್ಮೋಪದೇಶಕಾಂಡ 8 : 15 (IRVKN)
ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
ಧರ್ಮೋಪದೇಶಕಾಂಡ 8 : 16 (IRVKN)
ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
ಧರ್ಮೋಪದೇಶಕಾಂಡ 8 : 17 (IRVKN)
ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
ಧರ್ಮೋಪದೇಶಕಾಂಡ 8 : 18 (IRVKN)
ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 8 : 19 (IRVKN)
ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
ಧರ್ಮೋಪದೇಶಕಾಂಡ 8 : 20 (IRVKN)
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20