ಧರ್ಮೋಪದೇಶಕಾಂಡ 9 : 1 (IRVKN)
{ದೇವರ ಕೃಪೆಯಿಂದಲೇ ವಿಜಯ} [PS] ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
ಧರ್ಮೋಪದೇಶಕಾಂಡ 9 : 2 (IRVKN)
ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
ಧರ್ಮೋಪದೇಶಕಾಂಡ 9 : 3 (IRVKN)
ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ. [PE][PS]
ಧರ್ಮೋಪದೇಶಕಾಂಡ 9 : 4 (IRVKN)
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
ಧರ್ಮೋಪದೇಶಕಾಂಡ 9 : 5 (IRVKN)
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
ಧರ್ಮೋಪದೇಶಕಾಂಡ 9 : 6 (IRVKN)
ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ. [PS]
ಧರ್ಮೋಪದೇಶಕಾಂಡ 9 : 7 (IRVKN)
{ಬಂಗಾರದ ಬಸವನ ಮೂರ್ತಿ} [PS] ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
ಧರ್ಮೋಪದೇಶಕಾಂಡ 9 : 8 (IRVKN)
ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
ಧರ್ಮೋಪದೇಶಕಾಂಡ 9 : 9 (IRVKN)
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
ಧರ್ಮೋಪದೇಶಕಾಂಡ 9 : 10 (IRVKN)
ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
ಧರ್ಮೋಪದೇಶಕಾಂಡ 9 : 11 (IRVKN)
ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
ಧರ್ಮೋಪದೇಶಕಾಂಡ 9 : 12 (IRVKN)
ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
ಧರ್ಮೋಪದೇಶಕಾಂಡ 9 : 13 (IRVKN)
ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.
ಧರ್ಮೋಪದೇಶಕಾಂಡ 9 : 14 (IRVKN)
ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
ಧರ್ಮೋಪದೇಶಕಾಂಡ 9 : 15 (IRVKN)
ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ
ಧರ್ಮೋಪದೇಶಕಾಂಡ 9 : 16 (IRVKN)
ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
ಧರ್ಮೋಪದೇಶಕಾಂಡ 9 : 17 (IRVKN)
ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು. [PE][PS]
ಧರ್ಮೋಪದೇಶಕಾಂಡ 9 : 18 (IRVKN)
ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
ಧರ್ಮೋಪದೇಶಕಾಂಡ 9 : 19 (IRVKN)
ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
ಧರ್ಮೋಪದೇಶಕಾಂಡ 9 : 20 (IRVKN)
ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
ಧರ್ಮೋಪದೇಶಕಾಂಡ 9 : 21 (IRVKN)
ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ. [PE][PS]
ಧರ್ಮೋಪದೇಶಕಾಂಡ 9 : 22 (IRVKN)
ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
ಧರ್ಮೋಪದೇಶಕಾಂಡ 9 : 23 (IRVKN)
ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
ಧರ್ಮೋಪದೇಶಕಾಂಡ 9 : 24 (IRVKN)
[* ಅಥವಾ ಯೆಹೋವನಿಗೆ ನಿಮ್ಮ ಪರಿಚಯವಾದಂದಿನಿಂದಲೂ. ] ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ. [PE][PS]
ಧರ್ಮೋಪದೇಶಕಾಂಡ 9 : 25 (IRVKN)
ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
ಧರ್ಮೋಪದೇಶಕಾಂಡ 9 : 26 (IRVKN)
ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
ಧರ್ಮೋಪದೇಶಕಾಂಡ 9 : 27 (IRVKN)
ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
ಧರ್ಮೋಪದೇಶಕಾಂಡ 9 : 28 (IRVKN)
ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
ಧರ್ಮೋಪದೇಶಕಾಂಡ 9 : 29 (IRVKN)
ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: