ಪ್ರಸಂಗಿ 1 : 1 (IRVKN)
ಎಲ್ಲವೂ ವ್ಯರ್ಥ ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.
ಪ್ರಸಂಗಿ 1 : 2 (IRVKN)
ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.
ಪ್ರಸಂಗಿ 1 : 3 (IRVKN)
ಈ ಲೋಕದಲ್ಲಿ* ಈ ಲೋಕದಲ್ಲಿ ಅಥವಾ ಸೂರ್ಯನ ಕೆಳಗೆ. ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
ಪ್ರಸಂಗಿ 1 : 4 (IRVKN)
ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
ಪ್ರಸಂಗಿ 1 : 5 (IRVKN)
ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
ಪ್ರಸಂಗಿ 1 : 6 (IRVKN)
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
ಪ್ರಸಂಗಿ 1 : 7 (IRVKN)
ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
ಪ್ರಸಂಗಿ 1 : 8 (IRVKN)
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
ಪ್ರಸಂಗಿ 1 : 9 (IRVKN)
ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
ಪ್ರಸಂಗಿ 1 : 10 (IRVKN)
‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
ಪ್ರಸಂಗಿ 1 : 11 (IRVKN)
ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”
ಪ್ರಸಂಗಿ 1 : 12 (IRVKN)
ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
ಪ್ರಸಂಗಿ 1 : 13 (IRVKN)
ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
ಪ್ರಸಂಗಿ 1 : 14 (IRVKN)
ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಗಾಳಿಯನ್ನು ಹಿಂದಟ್ಟುವ ಅಥವಾ ಗಾಳಿಯನ್ನು ತಿನ್ನುವ ಹಾಗೆ. ಹಾಗೆ ಸಮಸ್ತವೂ ವ್ಯರ್ಥ.
ಪ್ರಸಂಗಿ 1 : 15 (IRVKN)
ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
ಪ್ರಸಂಗಿ 1 : 16 (IRVKN)
ಜ್ಞಾನಿಯ ಅನಿಸಿಕೆ ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
ಪ್ರಸಂಗಿ 1 : 17 (IRVKN)
ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.
ಪ್ರಸಂಗಿ 1 : 18 (IRVKN)
ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.

1 2 3 4 5 6 7 8 9 10 11 12 13 14 15 16 17 18