ಪ್ರಸಂಗಿ 10 : 1 (IRVKN)
ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
ಪ್ರಸಂಗಿ 10 : 2 (IRVKN)
ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.
ಪ್ರಸಂಗಿ 10 : 3 (IRVKN)
ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.
ಪ್ರಸಂಗಿ 10 : 4 (IRVKN)
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.* ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ ಅಥವಾ ನೀನು ಶಾಂತನಾಗಿರುವಾಗ ದೊಡ್ಡ ದೋಷಗಳು ಕ್ಷಮಿಸಲ್ಪಡುತ್ತವೆ ಅಥವಾ ನಿನ್ನ ದೋಷಗಳನ್ನು ಅವನಿಗೆ ಒಪ್ಪಿಸಿಕೊಡು.
ಪ್ರಸಂಗಿ 10 : 5 (IRVKN)
ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
ಪ್ರಸಂಗಿ 10 : 6 (IRVKN)
ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.
ಪ್ರಸಂಗಿ 10 : 7 (IRVKN)
ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
ಪ್ರಸಂಗಿ 10 : 8 (IRVKN)
ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
ಪ್ರಸಂಗಿ 10 : 9 (IRVKN)
ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
ಪ್ರಸಂಗಿ 10 : 10 (IRVKN)
ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
ಪ್ರಸಂಗಿ 10 : 11 (IRVKN)
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
ಪ್ರಸಂಗಿ 10 : 12 (IRVKN)
ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
ಪ್ರಸಂಗಿ 10 : 13 (IRVKN)
ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
ಪ್ರಸಂಗಿ 10 : 14 (IRVKN)
ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
ಪ್ರಸಂಗಿ 10 : 15 (IRVKN)
ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
ಪ್ರಸಂಗಿ 10 : 16 (IRVKN)
ದೇಶದ ಅರಸನು ಯುವಕನಾಗಿದ್ದರೆ, ಯುವಕನಾಗಿದ್ದರೆ, ಅಥವಾ ಸೇವಕನಾಗಿದ್ದರೆ. ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
ಪ್ರಸಂಗಿ 10 : 17 (IRVKN)
ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
ಪ್ರಸಂಗಿ 10 : 18 (IRVKN)
ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
ಪ್ರಸಂಗಿ 10 : 19 (IRVKN)
ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
ಪ್ರಸಂಗಿ 10 : 20 (IRVKN)
ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.

1 2 3 4 5 6 7 8 9 10 11 12 13 14 15 16 17 18 19 20