ಪ್ರಸಂಗಿ 12 : 1 (IRVKN)
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
ಪ್ರಸಂಗಿ 12 : 2 (IRVKN)
ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
ಪ್ರಸಂಗಿ 12 : 3 (IRVKN)
* ಇಲ್ಲಿ ಮನೆ ಮಾನವ ಶಾರೀರಿಕ ದೇಹವೆಂಬ, ಗಾವಲಿನವರು ಕೈಗಳೆಂಬ, ಬಲಿಷ್ಠರು ಕಾಲುಗಳೆಂಬ, ಅರೆಯುವವರು ಹಲ್ಲುಗಳೆಂಬ, ಮತ್ತು ನೋಡುವವರು ಕಣ್ಣುಗಳೆಂಬ ಅರ್ಥವನ್ನು ನೀಡುತ್ತದೆ. ಈ ಉದಾಹರಣೆಗಳು ಮರಣದ ಅರ್ಥವನ್ನು ಸಹ ತೋರಿಸುತ್ತವೆ ಎಂದು ಕೆಲವು ಪಂಡಿತರು ಹೇಳುತ್ತಾರೆ. ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
ಪ್ರಸಂಗಿ 12 : 4 (IRVKN)
ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
ಪ್ರಸಂಗಿ 12 : 5 (IRVKN)
ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
ಪ್ರಸಂಗಿ 12 : 6 (IRVKN)
ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
ಪ್ರಸಂಗಿ 12 : 7 (IRVKN)
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಪ್ರಸಂಗಿ 12 : 8 (IRVKN)
“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
ಪ್ರಸಂಗಿ 12 : 9 (IRVKN)
ಸಮಾಪ್ತಿ
ಪ್ರಸಂಗಿ 12 : 10 (IRVKN)
ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು. ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
ಪ್ರಸಂಗಿ 12 : 11 (IRVKN)
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
ಪ್ರಸಂಗಿ 12 : 12 (IRVKN)
ಪ್ರಸಂಗಿ 12 : 13 (IRVKN)
ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ಪ್ರಸಂಗಿ 12 : 14 (IRVKN)
ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

1 2 3 4 5 6 7 8 9 10 11 12 13 14