ಪ್ರಸಂಗಿ 6 : 1 (IRVKN)
[PS]ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
ಪ್ರಸಂಗಿ 6 : 2 (IRVKN)
ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ. [PE]
ಪ್ರಸಂಗಿ 6 : 3 (IRVKN)
[PS]ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
ಪ್ರಸಂಗಿ 6 : 4 (IRVKN)
ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.[* ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. ಅಥವಾ ಅವನ ಹೆಸರು ಮರೆತುಹೋಗಲ್ಪಡುತ್ತದೆ. ] [PE]
ಪ್ರಸಂಗಿ 6 : 5 (IRVKN)
[PS]ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
ಪ್ರಸಂಗಿ 6 : 6 (IRVKN)
ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ. [PE]
ಪ್ರಸಂಗಿ 6 : 7 (IRVKN)
[QS]ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, [QE][QS2]ಆದರೂ ಅವನಿಗೆ ತೃಪ್ತಿಯಿಲ್ಲ. [QE]
ಪ್ರಸಂಗಿ 6 : 8 (IRVKN)
[QS]ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? [QE][QS2]ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ [QE][QS3]ಬಡವನಿಗೆ ಲಾಭವೇನು? [QE]
ಪ್ರಸಂಗಿ 6 : 9 (IRVKN)
[QS]ಬಗೆಬಗೆಯಾಗಿ ಆಶಿಸುವುದಕ್ಕಿಂತ [QE][QS2]ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. [QE][QS]ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. [QE]
ಪ್ರಸಂಗಿ 6 : 10 (IRVKN)
[QS]ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು. [QE]
ಪ್ರಸಂಗಿ 6 : 11 (IRVKN)
[QS]ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, [QE][QS2]ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ? [QE]
ಪ್ರಸಂಗಿ 6 : 12 (IRVKN)
[PS]ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? [PE]
❮
❯
1
2
3
4
5
6
7
8
9
10
11
12