ಪ್ರಸಂಗಿ 7 : 1 (IRVKN)
ಜ್ಞಾನ ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
ಪ್ರಸಂಗಿ 7 : 2 (IRVKN)
ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
ಪ್ರಸಂಗಿ 7 : 3 (IRVKN)
ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
ಪ್ರಸಂಗಿ 7 : 4 (IRVKN)
ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
ಪ್ರಸಂಗಿ 7 : 5 (IRVKN)
ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
ಪ್ರಸಂಗಿ 7 : 6 (IRVKN)
ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
ಪ್ರಸಂಗಿ 7 : 7 (IRVKN)
ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
ಪ್ರಸಂಗಿ 7 : 8 (IRVKN)
ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
ಪ್ರಸಂಗಿ 7 : 9 (IRVKN)
ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
ಪ್ರಸಂಗಿ 7 : 10 (IRVKN)
ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
ಪ್ರಸಂಗಿ 7 : 11 (IRVKN)
ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ* ಲೋಕದಲ್ಲಿ ಜೀವಿಸುವವರಿಗೆ ಅಥವಾ ಸೂರ್ಯನನ್ನು ನೋಡುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
ಪ್ರಸಂಗಿ 7 : 12 (IRVKN)
ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
ಪ್ರಸಂಗಿ 7 : 13 (IRVKN)
ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
ಪ್ರಸಂಗಿ 7 : 14 (IRVKN)
ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
ಪ್ರಸಂಗಿ 7 : 15 (IRVKN)
ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
ಪ್ರಸಂಗಿ 7 : 16 (IRVKN)
ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
ಪ್ರಸಂಗಿ 7 : 17 (IRVKN)
ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
ಪ್ರಸಂಗಿ 7 : 18 (IRVKN)
ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
ಪ್ರಸಂಗಿ 7 : 19 (IRVKN)
ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
ಪ್ರಸಂಗಿ 7 : 20 (IRVKN)
ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
ಪ್ರಸಂಗಿ 7 : 21 (IRVKN)
ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
ಪ್ರಸಂಗಿ 7 : 22 (IRVKN)
ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
ಪ್ರಸಂಗಿ 7 : 23 (IRVKN)
ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
ಪ್ರಸಂಗಿ 7 : 24 (IRVKN)
ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
ಪ್ರಸಂಗಿ 7 : 25 (IRVKN)
ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
ಪ್ರಸಂಗಿ 7 : 26 (IRVKN)
ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
ಪ್ರಸಂಗಿ 7 : 27 (IRVKN)
ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
ಪ್ರಸಂಗಿ 7 : 28 (IRVKN)
ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
ಪ್ರಸಂಗಿ 7 : 29 (IRVKN)
ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29