ಎಸ್ತೇರಳು 2 : 1 (IRVKN)
ಪಟ್ಟದ ರಾಣಿಯಾದ ಎಸ್ತೇರಳು ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.
ಎಸ್ತೇರಳು 2 : 2 (IRVKN)
ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.
ಎಸ್ತೇರಳು 2 : 3 (IRVKN)
ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.
ಎಸ್ತೇರಳು 2 : 4 (IRVKN)
ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.
ಎಸ್ತೇರಳು 2 : 5 (IRVKN)
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
ಎಸ್ತೇರಳು 2 : 6 (IRVKN)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು.
ಎಸ್ತೇರಳು 2 : 7 (IRVKN)
ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.
ಎಸ್ತೇರಳು 2 : 8 (IRVKN)
ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
ಎಸ್ತೇರಳು 2 : 9 (IRVKN)
ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
ಎಸ್ತೇರಳು 2 : 10 (IRVKN)
ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.
ಎಸ್ತೇರಳು 2 : 11 (IRVKN)
ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
ಎಸ್ತೇರಳು 2 : 12 (IRVKN)
ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
ಎಸ್ತೇರಳು 2 : 13 (IRVKN)
ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.
ಎಸ್ತೇರಳು 2 : 14 (IRVKN)
ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.
ಎಸ್ತೇರಳು 2 : 15 (IRVKN)
ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
ಎಸ್ತೇರಳು 2 : 16 (IRVKN)
ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
ಎಸ್ತೇರಳು 2 : 17 (IRVKN)
ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.
ಎಸ್ತೇರಳು 2 : 18 (IRVKN)
ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ* ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ಅಥವಾ ರಜಾದಿನಗಳು ಅಥವಾ ತೆರಿಗೆಯಿಂದ ವಿಮೋಚನೆ. , ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
ಎಸ್ತೇರಳು 2 : 19 (IRVKN)
ಮೊರ್ದೆಕೈಯು ರಾಜಕಂಟಕರ ಒಳಸಂಚನ್ನು ಬಯಲುಮಾಡಿದ್ದು ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
ಎಸ್ತೇರಳು 2 : 20 (IRVKN)
ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.
ಎಸ್ತೇರಳು 2 : 21 (IRVKN)
ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
ಎಸ್ತೇರಳು 2 : 22 (IRVKN)
ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.
ಎಸ್ತೇರಳು 2 : 23 (IRVKN)
ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23