ಎಸ್ತೇರಳು 5 : 1 (IRVKN)
ಎಸ್ತೇರಳು ಅರಸನನ್ನೂ ಹಾಮಾನನ್ನೂ ಔತಣಕ್ಕೆ ಆಹ್ವಾನಿಸಿದ್ದು ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
ಎಸ್ತೇರಳು 5 : 2 (IRVKN)
ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
ಎಸ್ತೇರಳು 5 : 3 (IRVKN)
ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
ಎಸ್ತೇರಳು 5 : 4 (IRVKN)
ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.
ಎಸ್ತೇರಳು 5 : 5 (IRVKN)
ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.
ಎಸ್ತೇರಳು 5 : 6 (IRVKN)
ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
ಎಸ್ತೇರಳು 5 : 7 (IRVKN)
ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
ಎಸ್ತೇರಳು 5 : 8 (IRVKN)
ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು.* ಆಗ ಅರಸರು ಹೇಳಿದಂತೆ ಮಾಡುವೆನು. ಅಥವಾ ಆಗ ನನಗೆ ಏನು ಬೇಕೆಂದು ಹೇಳುವೆನು ಅಥವಾ ಆಗ ನಾನು ಇದೆಲ್ಲವನ್ನು ವಿವರಿಸುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
ಎಸ್ತೇರಳು 5 : 9 (IRVKN)
ಮೊರ್ದೆಕೈಯನ್ನು ಗಲ್ಲಿಗೆ ಹಾಕಬೇಕೆಂದು ನಿರ್ಣಯಿಸಿದ ಹಾಮಾನ ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
ಎಸ್ತೇರಳು 5 : 10 (IRVKN)
ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.
ಎಸ್ತೇರಳು 5 : 11 (IRVKN)
ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
ಎಸ್ತೇರಳು 5 : 12 (IRVKN)
“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
ಎಸ್ತೇರಳು 5 : 13 (IRVKN)
ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
ಎಸ್ತೇರಳು 5 : 14 (IRVKN)
ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
❮
❯
1
2
3
4
5
6
7
8
9
10
11
12
13
14