ಎಸ್ತೇರಳು 9 : 1 (IRVKN)
ಯೆಹೂದ್ಯರು ತಮ್ಮ ವೈರಿಗಳನ್ನು ಸಂಹರಿಸಿ ಮಹೋತ್ಸವ ಮಾಡಿದ್ದು ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
ಎಸ್ತೇರಳು 9 : 2 (IRVKN)
ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
ಎಸ್ತೇರಳು 9 : 3 (IRVKN)
ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
ಎಸ್ತೇರಳು 9 : 4 (IRVKN)
ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
ಎಸ್ತೇರಳು 9 : 5 (IRVKN)
ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
ಎಸ್ತೇರಳು 9 : 6 (IRVKN)
ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
ಎಸ್ತೇರಳು 9 : 7 (IRVKN)
ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
ಎಸ್ತೇರಳು 9 : 9 (IRVKN)
ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
ಎಸ್ತೇರಳು 9 : 10 (IRVKN)
ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
ಎಸ್ತೇರಳು 9 : 11 (IRVKN)
ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
ಎಸ್ತೇರಳು 9 : 12 (IRVKN)
ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
ಎಸ್ತೇರಳು 9 : 13 (IRVKN)
ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
ಎಸ್ತೇರಳು 9 : 14 (IRVKN)
ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
ಎಸ್ತೇರಳು 9 : 15 (IRVKN)
ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
ಎಸ್ತೇರಳು 9 : 16 (IRVKN)
ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
ಎಸ್ತೇರಳು 9 : 17 (IRVKN)
ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
ಎಸ್ತೇರಳು 9 : 18 (IRVKN)
ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
ಎಸ್ತೇರಳು 9 : 19 (IRVKN)
ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
ಎಸ್ತೇರಳು 9 : 20 (IRVKN)
ಪೂರೀಮ್ ಹಬ್ಬ ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
ಎಸ್ತೇರಳು 9 : 21 (IRVKN)
ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
ಎಸ್ತೇರಳು 9 : 22 (IRVKN)
ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
ಎಸ್ತೇರಳು 9 : 23 (IRVKN)
ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
ಎಸ್ತೇರಳು 9 : 24 (IRVKN)
ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
ಎಸ್ತೇರಳು 9 : 25 (IRVKN)
ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
ಎಸ್ತೇರಳು 9 : 26 (IRVKN)
ಆ “ಪೂರ್* ಪೂರ್ ಚೀಟು. ” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
ಎಸ್ತೇರಳು 9 : 27 (IRVKN)
ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
ಎಸ್ತೇರಳು 9 : 28 (IRVKN)
ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
ಎಸ್ತೇರಳು 9 : 29 (IRVKN)
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
ಎಸ್ತೇರಳು 9 : 30 (IRVKN)
ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
ಎಸ್ತೇರಳು 9 : 31 (IRVKN)
ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
ಎಸ್ತೇರಳು 9 : 32 (IRVKN)
ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32