ವಿಮೋಚನಕಾಂಡ 1 : 1 (IRVKN)
{ಐಗುಪ್ತ ದೇಶದಲ್ಲಿ ಇಸ್ರಾಯೇಲರು ಹಿಂಸಿಸಲ್ಪಟ್ಟರು} [PS] ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
ವಿಮೋಚನಕಾಂಡ 1 : 2 (IRVKN)
ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
ವಿಮೋಚನಕಾಂಡ 1 : 3 (IRVKN)
ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
ವಿಮೋಚನಕಾಂಡ 1 : 4 (IRVKN)
ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
ವಿಮೋಚನಕಾಂಡ 1 : 5 (IRVKN)
ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. [PE][PS]
ವಿಮೋಚನಕಾಂಡ 1 : 6 (IRVKN)
ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
ವಿಮೋಚನಕಾಂಡ 1 : 7 (IRVKN)
ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
ವಿಮೋಚನಕಾಂಡ 1 : 8 (IRVKN)
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
ವಿಮೋಚನಕಾಂಡ 1 : 9 (IRVKN)
ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
ವಿಮೋಚನಕಾಂಡ 1 : 10 (IRVKN)
ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
ವಿಮೋಚನಕಾಂಡ 1 : 11 (IRVKN)
ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
ವಿಮೋಚನಕಾಂಡ 1 : 12 (IRVKN)
ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
ವಿಮೋಚನಕಾಂಡ 1 : 13 (IRVKN)
ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
ವಿಮೋಚನಕಾಂಡ 1 : 14 (IRVKN)
ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
ವಿಮೋಚನಕಾಂಡ 1 : 15 (IRVKN)
ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
ವಿಮೋಚನಕಾಂಡ 1 : 16 (IRVKN)
ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
ವಿಮೋಚನಕಾಂಡ 1 : 17 (IRVKN)
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
ವಿಮೋಚನಕಾಂಡ 1 : 18 (IRVKN)
ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
ವಿಮೋಚನಕಾಂಡ 1 : 19 (IRVKN)
ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
ವಿಮೋಚನಕಾಂಡ 1 : 20 (IRVKN)
ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
ವಿಮೋಚನಕಾಂಡ 1 : 21 (IRVKN)
ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು. [PE][PS]
ವಿಮೋಚನಕಾಂಡ 1 : 22 (IRVKN)
ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: