ವಿಮೋಚನಕಾಂಡ 11 : 1 (IRVKN)
{ಚೊಚ್ಚಲುಗಳ ಸಂಹಾರ} [PS] ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
ವಿಮೋಚನಕಾಂಡ 11 : 2 (IRVKN)
ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.
ವಿಮೋಚನಕಾಂಡ 11 : 3 (IRVKN)
ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. [PE][PS]
ವಿಮೋಚನಕಾಂಡ 11 : 4 (IRVKN)
ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
ವಿಮೋಚನಕಾಂಡ 11 : 5 (IRVKN)
ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
ವಿಮೋಚನಕಾಂಡ 11 : 6 (IRVKN)
ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.
ವಿಮೋಚನಕಾಂಡ 11 : 7 (IRVKN)
ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
ವಿಮೋಚನಕಾಂಡ 11 : 8 (IRVKN)
ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. [PE][PS]
ವಿಮೋಚನಕಾಂಡ 11 : 9 (IRVKN)
ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
ವಿಮೋಚನಕಾಂಡ 11 : 10 (IRVKN)
ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು. [PE]
❮
❯