ವಿಮೋಚನಕಾಂಡ 12 : 1 (IRVKN)
{ಮೊದಲ ಪಸ್ಕಹಬ್ಬ} [PS] ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ವಿಮೋಚನಕಾಂಡ 12 : 2 (IRVKN)
“ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.
ವಿಮೋಚನಕಾಂಡ 12 : 3 (IRVKN)
ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
ವಿಮೋಚನಕಾಂಡ 12 : 4 (IRVKN)
ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
ವಿಮೋಚನಕಾಂಡ 12 : 5 (IRVKN)
ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
ವಿಮೋಚನಕಾಂಡ 12 : 6 (IRVKN)
ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
ವಿಮೋಚನಕಾಂಡ 12 : 7 (IRVKN)
ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
ವಿಮೋಚನಕಾಂಡ 12 : 8 (IRVKN)
ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
ವಿಮೋಚನಕಾಂಡ 12 : 9 (IRVKN)
ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.
ವಿಮೋಚನಕಾಂಡ 12 : 10 (IRVKN)
ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ವಿಮೋಚನಕಾಂಡ 12 : 11 (IRVKN)
ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, [* ಅಥವಾ ಹೊರಟುಹೋಗಲು ಸಿದ್ಧರಾಗುವುದು.] ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ [† ಪಸ್ಕಹಬ್ಬ ಅಂದರೆ ಸಂಹಾರದೂತನು ಐಗುಪ್ತ್ಯ ಚೊಚ್ಚಲುಗಳನ್ನು ಸಂಹರಿಸಿದಾಗ ಇಸ್ರಾಯೇಲರನ್ನು ಸಂಹರಿಸದೆ ದಾಟಿಹೋದದ್ದನ್ನು ನೆನಪಿಸಿಕೊಳ್ಳುವುದಕ್ಕಾಗಿ ಆಚರಿಸುವ ಹಬ್ಬ.] ಪಸ್ಕಹಬ್ಬವು.
ವಿಮೋಚನಕಾಂಡ 12 : 12 (IRVKN)
ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ [‡ ಅಥವಾ ಐಗುಪ್ತದೇಶದ ಸಮಸ್ತ ದೇವತೆಗಳು ಸುಳ್ಳಾದ ದೇವತೆಗಳೆಂದು ನಾನು ಸಾಬೀತುಪಡಿಸುತ್ತೇನೆ. ] ನ್ಯಾಯತೀರಿಸುವೆನು. ನಾನೇ ಯೆಹೋವನು.
ವಿಮೋಚನಕಾಂಡ 12 : 13 (IRVKN)
ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.
ವಿಮೋಚನಕಾಂಡ 12 : 14 (IRVKN)
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು. [PS]
ವಿಮೋಚನಕಾಂಡ 12 : 15 (IRVKN)
{ಹುಳಿಯಿಲ್ಲದ ರೊಟ್ಟಿಯ ಹಬ್ಬ} [PS] “ ‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
ವಿಮೋಚನಕಾಂಡ 12 : 16 (IRVKN)
ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
ವಿಮೋಚನಕಾಂಡ 12 : 17 (IRVKN)
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
ವಿಮೋಚನಕಾಂಡ 12 : 18 (IRVKN)
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
ವಿಮೋಚನಕಾಂಡ 12 : 19 (IRVKN)
ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.
ವಿಮೋಚನಕಾಂಡ 12 : 20 (IRVKN)
ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’ ” ಎಂದು ಆಜ್ಞಾಪಿಸಿದನು. [PS]
ವಿಮೋಚನಕಾಂಡ 12 : 21 (IRVKN)
{ಮೊದಲನೆಯ ಪಸ್ಕ ಹಬ್ಬದ ಆಚರಣೆ} [PS] ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
ವಿಮೋಚನಕಾಂಡ 12 : 22 (IRVKN)
ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
ವಿಮೋಚನಕಾಂಡ 12 : 23 (IRVKN)
ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.
ವಿಮೋಚನಕಾಂಡ 12 : 24 (IRVKN)
ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.
ವಿಮೋಚನಕಾಂಡ 12 : 25 (IRVKN)
ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.
ವಿಮೋಚನಕಾಂಡ 12 : 26 (IRVKN)
ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,
ವಿಮೋಚನಕಾಂಡ 12 : 27 (IRVKN)
ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’ ” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
ವಿಮೋಚನಕಾಂಡ 12 : 28 (IRVKN)
ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು. [PS]
ವಿಮೋಚನಕಾಂಡ 12 : 29 (IRVKN)
{ಐಗುಪ್ತ್ಯರ ಚೊಚ್ಚಲುಗಳು ಸತ್ತುಹೋದದ್ದು} [PS] ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
ವಿಮೋಚನಕಾಂಡ 12 : 30 (IRVKN)
ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು. [PE][PS]
ವಿಮೋಚನಕಾಂಡ 12 : 31 (IRVKN)
ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.
ವಿಮೋಚನಕಾಂಡ 12 : 32 (IRVKN)
ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು. ವಿಮೋಚನೆ - ರಾಮ್ಸೇಸ್ ಪಟ್ಟಣದಿಂದ ಸುಕ್ಕೋತಿಗೆ ಪಯಣ [PE][PS]
ವಿಮೋಚನಕಾಂಡ 12 : 33 (IRVKN)
ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
ವಿಮೋಚನಕಾಂಡ 12 : 34 (IRVKN)
ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು. [PE][PS]
ವಿಮೋಚನಕಾಂಡ 12 : 35 (IRVKN)
ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.
ವಿಮೋಚನಕಾಂಡ 12 : 36 (IRVKN)
ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
ವಿಮೋಚನಕಾಂಡ 12 : 37 (IRVKN)
ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
ವಿಮೋಚನಕಾಂಡ 12 : 38 (IRVKN)
ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.
ವಿಮೋಚನಕಾಂಡ 12 : 39 (IRVKN)
ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. [PE][PS]
ವಿಮೋಚನಕಾಂಡ 12 : 40 (IRVKN)
ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.
ವಿಮೋಚನಕಾಂಡ 12 : 41 (IRVKN)
ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
ವಿಮೋಚನಕಾಂಡ 12 : 42 (IRVKN)
ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ. [PS]
ವಿಮೋಚನಕಾಂಡ 12 : 43 (IRVKN)
{ಪಸ್ಕಹಬ್ಬವನ್ನು ಆಚರಿಸಬೇಕಾದ ಕ್ರಮ} [PS] ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.
ವಿಮೋಚನಕಾಂಡ 12 : 44 (IRVKN)
ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.
ವಿಮೋಚನಕಾಂಡ 12 : 45 (IRVKN)
ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.
ವಿಮೋಚನಕಾಂಡ 12 : 46 (IRVKN)
ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
ವಿಮೋಚನಕಾಂಡ 12 : 47 (IRVKN)
ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 12 : 48 (IRVKN)
ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.
ವಿಮೋಚನಕಾಂಡ 12 : 49 (IRVKN)
ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು. [PE][PS]
ವಿಮೋಚನಕಾಂಡ 12 : 50 (IRVKN)
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
ವಿಮೋಚನಕಾಂಡ 12 : 51 (IRVKN)
ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51

BG:

Opacity:

Color:


Size:


Font: