ವಿಮೋಚನಕಾಂಡ 20 : 1 (IRVKN)
{ದಶಾಜ್ಞೆಗಳು} (ಧರ್ಮೋ 5:1-21) [PS] ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
ವಿಮೋಚನಕಾಂಡ 20 : 2 (IRVKN)
“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
ವಿಮೋಚನಕಾಂಡ 20 : 3 (IRVKN)
ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. [PE][PS]
ವಿಮೋಚನಕಾಂಡ 20 : 4 (IRVKN)
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
ವಿಮೋಚನಕಾಂಡ 20 : 5 (IRVKN)
ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
ವಿಮೋಚನಕಾಂಡ 20 : 6 (IRVKN)
ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
ವಿಮೋಚನಕಾಂಡ 20 : 7 (IRVKN)
ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. [PE][PS]
ವಿಮೋಚನಕಾಂಡ 20 : 8 (IRVKN)
“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
ವಿಮೋಚನಕಾಂಡ 20 : 9 (IRVKN)
ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
ವಿಮೋಚನಕಾಂಡ 20 : 10 (IRVKN)
ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
ವಿಮೋಚನಕಾಂಡ 20 : 11 (IRVKN)
ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. [PE][PS]
ವಿಮೋಚನಕಾಂಡ 20 : 12 (IRVKN)
“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. [PE][PS]
ವಿಮೋಚನಕಾಂಡ 20 : 13 (IRVKN)
“ಕೊಲೆ ಮಾಡಬಾರದು. [PE][PS]
ವಿಮೋಚನಕಾಂಡ 20 : 14 (IRVKN)
“ವ್ಯಭಿಚಾರಮಾಡಬಾರದು. [PE][PS]
ವಿಮೋಚನಕಾಂಡ 20 : 15 (IRVKN)
“ಕದಿಯಬಾರದು. [PE][PS]
ವಿಮೋಚನಕಾಂಡ 20 : 16 (IRVKN)
“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. [PE][PS]
ವಿಮೋಚನಕಾಂಡ 20 : 17 (IRVKN)
“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.” [PS]
ವಿಮೋಚನಕಾಂಡ 20 : 18 (IRVKN)
{ಜನರು ಭಯಪಟ್ಟಿದ್ದು} [PS] ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
ವಿಮೋಚನಕಾಂಡ 20 : 19 (IRVKN)
ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
ವಿಮೋಚನಕಾಂಡ 20 : 20 (IRVKN)
ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
ವಿಮೋಚನಕಾಂಡ 20 : 21 (IRVKN)
ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು. [PS]
ವಿಮೋಚನಕಾಂಡ 20 : 22 (IRVKN)
{ಯಜ್ಞವೇದಿಯ ಬಗ್ಗೆ ನಿಯಮಗಳು} [PS] ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
ವಿಮೋಚನಕಾಂಡ 20 : 23 (IRVKN)
ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
ವಿಮೋಚನಕಾಂಡ 20 : 24 (IRVKN)
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ವಿಮೋಚನಕಾಂಡ 20 : 25 (IRVKN)
ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
ವಿಮೋಚನಕಾಂಡ 20 : 26 (IRVKN)
ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’ ” ಎಂದು ಆಜ್ಞಾಪಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: