ವಿಮೋಚನಕಾಂಡ 23 : 1 (IRVKN)
ನ್ಯಾಯ ಮತ್ತು ಕರುಣೆಯ ಕುರಿತು ನಿಯಮಗಳು ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
ವಿಮೋಚನಕಾಂಡ 23 : 2 (IRVKN)
ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
ವಿಮೋಚನಕಾಂಡ 23 : 3 (IRVKN)
ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
ವಿಮೋಚನಕಾಂಡ 23 : 4 (IRVKN)
ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.
ವಿಮೋಚನಕಾಂಡ 23 : 5 (IRVKN)
ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
ವಿಮೋಚನಕಾಂಡ 23 : 6 (IRVKN)
ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
ವಿಮೋಚನಕಾಂಡ 23 : 7 (IRVKN)
ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
ವಿಮೋಚನಕಾಂಡ 23 : 8 (IRVKN)
ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು * ಅಧಿಕಾರಿಗಳು. ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
ವಿಮೋಚನಕಾಂಡ 23 : 9 (IRVKN)
ವಿಮೋಚನಕಾಂಡ 23 : 10 (IRVKN)
ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ. ಸಬ್ಬತ್ ದಿನ ಮತ್ತು ಸಬ್ಬತ್ ವರ್ಷದ ಕುರಿತಾದ ನಿಯಮಗಳು ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.
ವಿಮೋಚನಕಾಂಡ 23 : 11 (IRVKN)
ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
ವಿಮೋಚನಕಾಂಡ 23 : 12 (IRVKN)
ವಿಮೋಚನಕಾಂಡ 23 : 13 (IRVKN)
ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
ವಿಮೋಚನಕಾಂಡ 23 : 14 (IRVKN)
ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು. ವಾರ್ಷಿಕ ಹಬ್ಬಗಳು
ವಿಮೋ 34:18-26; ಧರ್ಮೋ 16:1-17 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.
ವಿಮೋಚನಕಾಂಡ 23 : 15 (IRVKN)
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
ವಿಮೋಚನಕಾಂಡ 23 : 16 (IRVKN)
ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 23 : 17 (IRVKN)
ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
ವಿಮೋಚನಕಾಂಡ 23 : 18 (IRVKN)
ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.
ವಿಮೋಚನಕಾಂಡ 23 : 19 (IRVKN)
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ವಿಮೋಚನಕಾಂಡ 23 : 20 (IRVKN)
ಕಾನಾನ್ ದೇಶವನ್ನು ಗೆಲ್ಲುವುದರ ವಾಗ್ದಾನಗಳು ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.
ವಿಮೋಚನಕಾಂಡ 23 : 21 (IRVKN)
ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. † ನಾನು ನನ್ನ ಪೂರ್ಣ ಅಧಿಕಾರವನ್ನು ಆತನಿಗೆ ಕೊಡುವೆನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
ವಿಮೋಚನಕಾಂಡ 23 : 22 (IRVKN)
ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.
ವಿಮೋಚನಕಾಂಡ 23 : 23 (IRVKN)
ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.
ವಿಮೋಚನಕಾಂಡ 23 : 24 (IRVKN)
ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
ವಿಮೋಚನಕಾಂಡ 23 : 25 (IRVKN)
ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
ವಿಮೋಚನಕಾಂಡ 23 : 26 (IRVKN)
ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
ವಿಮೋಚನಕಾಂಡ 23 : 27 (IRVKN)
ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
ವಿಮೋಚನಕಾಂಡ 23 : 28 (IRVKN)
ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.
ವಿಮೋಚನಕಾಂಡ 23 : 29 (IRVKN)
ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
ವಿಮೋಚನಕಾಂಡ 23 : 30 (IRVKN)
ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.
ವಿಮೋಚನಕಾಂಡ 23 : 31 (IRVKN)
ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
ವಿಮೋಚನಕಾಂಡ 23 : 32 (IRVKN)
ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
ವಿಮೋಚನಕಾಂಡ 23 : 33 (IRVKN)
ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ‡ ಅವರು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
❮
❯