ವಿಮೋಚನಕಾಂಡ 26 : 1 (IRVKN)
{ದೇವದರ್ಶನದ ಗುಡಾರ} (36:8-38) [PS] ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
ವಿಮೋಚನಕಾಂಡ 26 : 2 (IRVKN)
ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
ವಿಮೋಚನಕಾಂಡ 26 : 3 (IRVKN)
ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
ವಿಮೋಚನಕಾಂಡ 26 : 4 (IRVKN)
ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 5 (IRVKN)
ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
ವಿಮೋಚನಕಾಂಡ 26 : 6 (IRVKN)
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು. [PE][PS]
ವಿಮೋಚನಕಾಂಡ 26 : 7 (IRVKN)
ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 8 (IRVKN)
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
ವಿಮೋಚನಕಾಂಡ 26 : 9 (IRVKN)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
ವಿಮೋಚನಕಾಂಡ 26 : 10 (IRVKN)
ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 11 (IRVKN)
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
ವಿಮೋಚನಕಾಂಡ 26 : 12 (IRVKN)
ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
ವಿಮೋಚನಕಾಂಡ 26 : 13 (IRVKN)
ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
ವಿಮೋಚನಕಾಂಡ 26 : 14 (IRVKN)
ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು [* ಕೆಲವು ಅನುವಾದಗಳಲ್ಲಿ ಕಡಲು ಹಂದಿ.] ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು. [PS]
ವಿಮೋಚನಕಾಂಡ 26 : 15 (IRVKN)
{ದೇವದರ್ಶನದ ಗುಡಾರದ ನಿರ್ಮಾಣ} [PS] ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
ವಿಮೋಚನಕಾಂಡ 26 : 16 (IRVKN)
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
ವಿಮೋಚನಕಾಂಡ 26 : 17 (IRVKN)
ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
ವಿಮೋಚನಕಾಂಡ 26 : 18 (IRVKN)
ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
ವಿಮೋಚನಕಾಂಡ 26 : 19 (IRVKN)
ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
ವಿಮೋಚನಕಾಂಡ 26 : 20 (IRVKN)
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
ವಿಮೋಚನಕಾಂಡ 26 : 21 (IRVKN)
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
ವಿಮೋಚನಕಾಂಡ 26 : 22 (IRVKN)
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 23 (IRVKN)
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 24 (IRVKN)
ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
ವಿಮೋಚನಕಾಂಡ 26 : 25 (IRVKN)
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
ವಿಮೋಚನಕಾಂಡ 26 : 26 (IRVKN)
ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
ವಿಮೋಚನಕಾಂಡ 26 : 27 (IRVKN)
ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
ವಿಮೋಚನಕಾಂಡ 26 : 28 (IRVKN)
ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
ವಿಮೋಚನಕಾಂಡ 26 : 29 (IRVKN)
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
ವಿಮೋಚನಕಾಂಡ 26 : 30 (IRVKN)
ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು. [PE][PS]
ವಿಮೋಚನಕಾಂಡ 26 : 31 (IRVKN)
ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
ವಿಮೋಚನಕಾಂಡ 26 : 32 (IRVKN)
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
ವಿಮೋಚನಕಾಂಡ 26 : 33 (IRVKN)
ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
ವಿಮೋಚನಕಾಂಡ 26 : 34 (IRVKN)
ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
ವಿಮೋಚನಕಾಂಡ 26 : 35 (IRVKN)
ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
ವಿಮೋಚನಕಾಂಡ 26 : 36 (IRVKN)
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
ವಿಮೋಚನಕಾಂಡ 26 : 37 (IRVKN)
ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು. [PE]
❮
❯