ವಿಮೋಚನಕಾಂಡ 30 : 1 (IRVKN)
ಧೂಪವೇದಿ
ವಿಮೋ 37:25-28 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
ವಿಮೋಚನಕಾಂಡ 30 : 2 (IRVKN)
ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
ವಿಮೋಚನಕಾಂಡ 30 : 3 (IRVKN)
ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
ವಿಮೋಚನಕಾಂಡ 30 : 4 (IRVKN)
ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
ವಿಮೋಚನಕಾಂಡ 30 : 5 (IRVKN)
ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
ವಿಮೋಚನಕಾಂಡ 30 : 6 (IRVKN)
ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
ವಿಮೋಚನಕಾಂಡ 30 : 7 (IRVKN)
“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ
ವಿಮೋಚನಕಾಂಡ 30 : 8 (IRVKN)
ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
ವಿಮೋಚನಕಾಂಡ 30 : 9 (IRVKN)
ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
ವಿಮೋಚನಕಾಂಡ 30 : 10 (IRVKN)
ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
ವಿಮೋಚನಕಾಂಡ 30 : 11 (IRVKN)
ಗುಡಾರಕ್ಕಾಗಿ ಕೊಡಬೇಕಾದ ಕಾಣಿಕೆ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
ವಿಮೋಚನಕಾಂಡ 30 : 12 (IRVKN)
“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
ವಿಮೋಚನಕಾಂಡ 30 : 13 (IRVKN)
ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು * ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ. ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
ವಿಮೋಚನಕಾಂಡ 30 : 14 (IRVKN)
ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
ವಿಮೋಚನಕಾಂಡ 30 : 15 (IRVKN)
ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
ವಿಮೋಚನಕಾಂಡ 30 : 16 (IRVKN)
ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
ವಿಮೋಚನಕಾಂಡ 30 : 17 (IRVKN)
ತ್ರಾಮದ ತೊಟ್ಟಿಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
ವಿಮೋಚನಕಾಂಡ 30 : 18 (IRVKN)
“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.
ವಿಮೋಚನಕಾಂಡ 30 : 19 (IRVKN)
ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
ವಿಮೋಚನಕಾಂಡ 30 : 20 (IRVKN)
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
ವಿಮೋಚನಕಾಂಡ 30 : 21 (IRVKN)
ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
ವಿಮೋಚನಕಾಂಡ 30 : 22 (IRVKN)
ಅಭಿಷೇಕ ತೈಲ ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,
ವಿಮೋಚನಕಾಂಡ 30 : 23 (IRVKN)
“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ † ಸುಮಾರು 6 ಕಿಲೋಗ್ರಾಂ. ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
ವಿಮೋಚನಕಾಂಡ 30 : 24 (IRVKN)
ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್‡ ಹೀನ್ ಸುಮಾರು ನಾಲ್ಕು ಲೀಟರು. ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,
ವಿಮೋಚನಕಾಂಡ 30 : 25 (IRVKN)
ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
ವಿಮೋಚನಕಾಂಡ 30 : 26 (IRVKN)
ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,
ವಿಮೋಚನಕಾಂಡ 30 : 27 (IRVKN)
ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,
ವಿಮೋಚನಕಾಂಡ 30 : 28 (IRVKN)
ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.
ವಿಮೋಚನಕಾಂಡ 30 : 29 (IRVKN)
ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
ವಿಮೋಚನಕಾಂಡ 30 : 30 (IRVKN)
ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”
ವಿಮೋಚನಕಾಂಡ 30 : 31 (IRVKN)
ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
ವಿಮೋಚನಕಾಂಡ 30 : 32 (IRVKN)
ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
ವಿಮೋಚನಕಾಂಡ 30 : 33 (IRVKN)
ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
ವಿಮೋಚನಕಾಂಡ 30 : 34 (IRVKN)
ಪರಿಮಳ ಧೂಪ ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
ವಿಮೋಚನಕಾಂಡ 30 : 35 (IRVKN)
ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
ವಿಮೋಚನಕಾಂಡ 30 : 36 (IRVKN)
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
ವಿಮೋಚನಕಾಂಡ 30 : 37 (IRVKN)
ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
ವಿಮೋಚನಕಾಂಡ 30 : 38 (IRVKN)
ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
❮
❯