ವಿಮೋಚನಕಾಂಡ 33 : 1 (IRVKN)
{ಸೀನಾಯಿ ಬೆಟ್ಟವನ್ನು ಬಿಟ್ಟುಹೋಗಬೇಕೆಂಬ ಆಜ್ಞೆ} [PS] ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
ವಿಮೋಚನಕಾಂಡ 33 : 2 (IRVKN)
ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.
ವಿಮೋಚನಕಾಂಡ 33 : 3 (IRVKN)
[* ಬಹಳಷ್ಟು ಫಲವತ್ತಾದ ದೇಶ.] ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು [† ಕಠಿಣ ಹೃದಯವುಳ್ಳವರು.] ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು. [PE][PS]
ವಿಮೋಚನಕಾಂಡ 33 : 4 (IRVKN)
ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
ವಿಮೋಚನಕಾಂಡ 33 : 5 (IRVKN)
ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’ ” ಅಂದನು.
ವಿಮೋಚನಕಾಂಡ 33 : 6 (IRVKN)
ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. [PS]
ವಿಮೋಚನಕಾಂಡ 33 : 7 (IRVKN)
{ದೇವದರ್ಶನ ಗುಡಾರ} [PS] ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.
ವಿಮೋಚನಕಾಂಡ 33 : 8 (IRVKN)
ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
ವಿಮೋಚನಕಾಂಡ 33 : 9 (IRVKN)
ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
ವಿಮೋಚನಕಾಂಡ 33 : 10 (IRVKN)
ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
ವಿಮೋಚನಕಾಂಡ 33 : 11 (IRVKN)
ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ. [PS]
ವಿಮೋಚನಕಾಂಡ 33 : 12 (IRVKN)
{ಮೋಶೆಯ ಪ್ರಾರ್ಥನೆ} [PS] ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “ ‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
ವಿಮೋಚನಕಾಂಡ 33 : 13 (IRVKN)
ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. [PE][PS]
ವಿಮೋಚನಕಾಂಡ 33 : 14 (IRVKN)
ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
ವಿಮೋಚನಕಾಂಡ 33 : 15 (IRVKN)
ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.
ವಿಮೋಚನಕಾಂಡ 33 : 16 (IRVKN)
ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. [PE][PS]
ವಿಮೋಚನಕಾಂಡ 33 : 17 (IRVKN)
ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
ವಿಮೋಚನಕಾಂಡ 33 : 18 (IRVKN)
ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.
ವಿಮೋಚನಕಾಂಡ 33 : 19 (IRVKN)
ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ [‡ ಸರ್ವೋತ್ತಮತ್ವವನ್ನು.] ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.
ವಿಮೋಚನಕಾಂಡ 33 : 20 (IRVKN)
ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.
ವಿಮೋಚನಕಾಂಡ 33 : 21 (IRVKN)
ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
ವಿಮೋಚನಕಾಂಡ 33 : 22 (IRVKN)
ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.
ವಿಮೋಚನಕಾಂಡ 33 : 23 (IRVKN)
ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: