ವಿಮೋಚನಕಾಂಡ 36 : 1 (IRVKN)
“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು. [PS]
ವಿಮೋಚನಕಾಂಡ 36 : 2 (IRVKN)
{ಇಸ್ರಾಯೇಲ್ಯರು ಮನಃಪೂರ್ವಕವಾಗಿ ಕಾಣಿಕೆಗಳನ್ನು ಕೊಟ್ಟದ್ದು} [PS] ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.
ವಿಮೋಚನಕಾಂಡ 36 : 3 (IRVKN)
ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
ವಿಮೋಚನಕಾಂಡ 36 : 4 (IRVKN)
ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,
ವಿಮೋಚನಕಾಂಡ 36 : 5 (IRVKN)
ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.
ವಿಮೋಚನಕಾಂಡ 36 : 6 (IRVKN)
ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.
ವಿಮೋಚನಕಾಂಡ 36 : 7 (IRVKN)
ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು. [PS]
ವಿಮೋಚನಕಾಂಡ 36 : 8 (IRVKN)
{ದೇವದರ್ಶನ ಗುಡಾರದ ನಿರ್ಮಾಣ} (ವಿಮೋ 26:1-37) [PS] ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
ವಿಮೋಚನಕಾಂಡ 36 : 9 (IRVKN)
ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.
ವಿಮೋಚನಕಾಂಡ 36 : 10 (IRVKN)
ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.
ವಿಮೋಚನಕಾಂಡ 36 : 11 (IRVKN)
ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ
ವಿಮೋಚನಕಾಂಡ 36 : 12 (IRVKN)
ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
ವಿಮೋಚನಕಾಂಡ 36 : 13 (IRVKN)
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು. [PE][PS]
ವಿಮೋಚನಕಾಂಡ 36 : 14 (IRVKN)
ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
ವಿಮೋಚನಕಾಂಡ 36 : 15 (IRVKN)
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.
ವಿಮೋಚನಕಾಂಡ 36 : 16 (IRVKN)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.
ವಿಮೋಚನಕಾಂಡ 36 : 17 (IRVKN)
ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.
ವಿಮೋಚನಕಾಂಡ 36 : 18 (IRVKN)
ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
ವಿಮೋಚನಕಾಂಡ 36 : 19 (IRVKN)
ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. [PE][PS]
ವಿಮೋಚನಕಾಂಡ 36 : 20 (IRVKN)
ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.
ವಿಮೋಚನಕಾಂಡ 36 : 21 (IRVKN)
ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
ವಿಮೋಚನಕಾಂಡ 36 : 22 (IRVKN)
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.
ವಿಮೋಚನಕಾಂಡ 36 : 23 (IRVKN)
ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;
ವಿಮೋಚನಕಾಂಡ 36 : 24 (IRVKN)
ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
ವಿಮೋಚನಕಾಂಡ 36 : 25 (IRVKN)
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
ವಿಮೋಚನಕಾಂಡ 36 : 26 (IRVKN)
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
ವಿಮೋಚನಕಾಂಡ 36 : 27 (IRVKN)
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.
ವಿಮೋಚನಕಾಂಡ 36 : 28 (IRVKN)
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.
ವಿಮೋಚನಕಾಂಡ 36 : 29 (IRVKN)
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
ವಿಮೋಚನಕಾಂಡ 36 : 30 (IRVKN)
ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
ವಿಮೋಚನಕಾಂಡ 36 : 31 (IRVKN)
ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.
ವಿಮೋಚನಕಾಂಡ 36 : 32 (IRVKN)
ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
ವಿಮೋಚನಕಾಂಡ 36 : 33 (IRVKN)
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
ವಿಮೋಚನಕಾಂಡ 36 : 34 (IRVKN)
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು. [PE][PS]
ವಿಮೋಚನಕಾಂಡ 36 : 35 (IRVKN)
ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
ವಿಮೋಚನಕಾಂಡ 36 : 36 (IRVKN)
ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. [PE][PS]
ವಿಮೋಚನಕಾಂಡ 36 : 37 (IRVKN)
ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.
ವಿಮೋಚನಕಾಂಡ 36 : 38 (IRVKN)
ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: