ವಿಮೋಚನಕಾಂಡ 38 : 1 (IRVKN)
{ಯಜ್ಞವೇದಿಯನ್ನು ಕಟ್ಟಿದ್ದು} (ವಿಮೋ 27:1-8) [PS] ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
ವಿಮೋಚನಕಾಂಡ 38 : 2 (IRVKN)
ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
ವಿಮೋಚನಕಾಂಡ 38 : 3 (IRVKN)
ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
ವಿಮೋಚನಕಾಂಡ 38 : 4 (IRVKN)
ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
ವಿಮೋಚನಕಾಂಡ 38 : 5 (IRVKN)
ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
ವಿಮೋಚನಕಾಂಡ 38 : 6 (IRVKN)
ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
ವಿಮೋಚನಕಾಂಡ 38 : 7 (IRVKN)
ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. [PE][PS]
ವಿಮೋಚನಕಾಂಡ 38 : 8 (IRVKN)
ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು. [PS]
ವಿಮೋಚನಕಾಂಡ 38 : 9 (IRVKN)
{ಗುಡಾರದ ಅಂಗಳವನ್ನು ಮಾಡಿದ್ದು} (ವಿಮೋ 27:9-19) [PS] ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
ವಿಮೋಚನಕಾಂಡ 38 : 10 (IRVKN)
ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
ವಿಮೋಚನಕಾಂಡ 38 : 11 (IRVKN)
ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
ವಿಮೋಚನಕಾಂಡ 38 : 12 (IRVKN)
ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
ವಿಮೋಚನಕಾಂಡ 38 : 13 (IRVKN)
ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
ವಿಮೋಚನಕಾಂಡ 38 : 14 (IRVKN)
(14-15) ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
ವಿಮೋಚನಕಾಂಡ 38 : 15 (IRVKN)
ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
ವಿಮೋಚನಕಾಂಡ 38 : 16 (IRVKN)
ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
ವಿಮೋಚನಕಾಂಡ 38 : 17 (IRVKN)
ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
ವಿಮೋಚನಕಾಂಡ 38 : 18 (IRVKN)
ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
ವಿಮೋಚನಕಾಂಡ 38 : 19 (IRVKN)
ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು. [PS]
ವಿಮೋಚನಕಾಂಡ 38 : 20 (IRVKN)
{ಗುಡಾರವನ್ನು ನಿರ್ಮಿಸುವುದರಲ್ಲಿ ಉಪಯೋಗಿಸಿದ ಸಾಮಗ್ರಿಗಳು} [PS] ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು. [PE][PS]
ವಿಮೋಚನಕಾಂಡ 38 : 21 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
ವಿಮೋಚನಕಾಂಡ 38 : 22 (IRVKN)
ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು. [PE][PS]
ವಿಮೋಚನಕಾಂಡ 38 : 23 (IRVKN)
ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ [* ಸುಮಾರು 1,050 ಕಿಲೋಗ್ರಾಂ ಬಂಗಾರ.] ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
ವಿಮೋಚನಕಾಂಡ 38 : 24 (IRVKN)
ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ [† 3,500 ಕಿಲೋಗ್ರಾಂ ಮತ್ತು 30 ಕಿಲೋಗ್ರಾಂ ಬೆಳ್ಳಿ.] ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
ವಿಮೋಚನಕಾಂಡ 38 : 25 (IRVKN)
ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
ವಿಮೋಚನಕಾಂಡ 38 : 26 (IRVKN)
ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
ವಿಮೋಚನಕಾಂಡ 38 : 27 (IRVKN)
ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು. [PE][PS]
ವಿಮೋಚನಕಾಂಡ 38 : 28 (IRVKN)
ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
ವಿಮೋಚನಕಾಂಡ 38 : 29 (IRVKN)
ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
ವಿಮೋಚನಕಾಂಡ 38 : 30 (IRVKN)
ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು. [PE]
ವಿಮೋಚನಕಾಂಡ 38 : 31 (IRVKN)

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: