ವಿಮೋಚನಕಾಂಡ 40 : 1 (IRVKN)
ದೇವದರ್ಶನ ಗುಡಾರದ ಪ್ರತಿಷ್ಠೆ ಆಗ ಯೆಹೋವನು ಮೋಶೆಗೆ,
ವಿಮೋಚನಕಾಂಡ 40 : 2 (IRVKN)
“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.
ವಿಮೋಚನಕಾಂಡ 40 : 3 (IRVKN)
ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.
ವಿಮೋಚನಕಾಂಡ 40 : 4 (IRVKN)
ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.
ವಿಮೋಚನಕಾಂಡ 40 : 5 (IRVKN)
ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.
ವಿಮೋಚನಕಾಂಡ 40 : 6 (IRVKN)
ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.
ವಿಮೋಚನಕಾಂಡ 40 : 7 (IRVKN)
ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.
ವಿಮೋಚನಕಾಂಡ 40 : 8 (IRVKN)
ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.
ವಿಮೋಚನಕಾಂಡ 40 : 9 (IRVKN)
“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
ವಿಮೋಚನಕಾಂಡ 40 : 10 (IRVKN)
ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
ವಿಮೋಚನಕಾಂಡ 40 : 11 (IRVKN)
ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
ವಿಮೋಚನಕಾಂಡ 40 : 12 (IRVKN)
“ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
ವಿಮೋಚನಕಾಂಡ 40 : 13 (IRVKN)
ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
ವಿಮೋಚನಕಾಂಡ 40 : 14 (IRVKN)
ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ
ವಿಮೋಚನಕಾಂಡ 40 : 15 (IRVKN)
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
ವಿಮೋಚನಕಾಂಡ 40 : 16 (IRVKN)
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
ವಿಮೋಚನಕಾಂಡ 40 : 17 (IRVKN)
ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
ವಿಮೋಚನಕಾಂಡ 40 : 18 (IRVKN)
ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
ವಿಮೋಚನಕಾಂಡ 40 : 19 (IRVKN)
ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
ವಿಮೋಚನಕಾಂಡ 40 : 20 (IRVKN)
ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
ವಿಮೋಚನಕಾಂಡ 40 : 21 (IRVKN)
ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
ವಿಮೋಚನಕಾಂಡ 40 : 22 (IRVKN)
ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
ವಿಮೋಚನಕಾಂಡ 40 : 23 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.
ವಿಮೋಚನಕಾಂಡ 40 : 24 (IRVKN)
ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
ವಿಮೋಚನಕಾಂಡ 40 : 25 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
ವಿಮೋಚನಕಾಂಡ 40 : 26 (IRVKN)
ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
ವಿಮೋಚನಕಾಂಡ 40 : 27 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
ವಿಮೋಚನಕಾಂಡ 40 : 28 (IRVKN)
ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.
ವಿಮೋಚನಕಾಂಡ 40 : 29 (IRVKN)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.
ವಿಮೋಚನಕಾಂಡ 40 : 30 (IRVKN)
ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
ವಿಮೋಚನಕಾಂಡ 40 : 31 (IRVKN)
ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
ವಿಮೋಚನಕಾಂಡ 40 : 32 (IRVKN)
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
ವಿಮೋಚನಕಾಂಡ 40 : 33 (IRVKN)
ವಿಮೋಚನಕಾಂಡ 40 : 34 (IRVKN)
ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಯೆಹೋವನ ತೇಜಸ್ಸು
ಅರಣ್ಯ 9:15-23
ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
ವಿಮೋಚನಕಾಂಡ 40 : 35 (IRVKN)
ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
ವಿಮೋಚನಕಾಂಡ 40 : 36 (IRVKN)
ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
ವಿಮೋಚನಕಾಂಡ 40 : 37 (IRVKN)
ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
ವಿಮೋಚನಕಾಂಡ 40 : 38 (IRVKN)
ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38