ವಿಮೋಚನಕಾಂಡ 6 : 1 (IRVKN)
{ಯೆಹೋವನು ಇಸ್ರಾಯೇಲರನ್ನು ಬಿಡುಗಡೆಗೊಳಿಸುವುದಾಗಿ ವಾಗ್ದಾನವನ್ನು ಮಾಡಿದ್ದು} [PS] ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು. [PE][PS]
ವಿಮೋಚನಕಾಂಡ 6 : 2 (IRVKN)
ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,
ವಿಮೋಚನಕಾಂಡ 6 : 3 (IRVKN)
ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ [* ಎಲ್ ಷಡಾಯ್.] ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
ವಿಮೋಚನಕಾಂಡ 6 : 4 (IRVKN)
ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
ವಿಮೋಚನಕಾಂಡ 6 : 5 (IRVKN)
ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
ವಿಮೋಚನಕಾಂಡ 6 : 6 (IRVKN)
ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
ವಿಮೋಚನಕಾಂಡ 6 : 7 (IRVKN)
ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
ವಿಮೋಚನಕಾಂಡ 6 : 8 (IRVKN)
ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
ವಿಮೋಚನಕಾಂಡ 6 : 9 (IRVKN)
ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
ವಿಮೋಚನಕಾಂಡ 6 : 10 (IRVKN)
ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ವಿಮೋಚನಕಾಂಡ 6 : 11 (IRVKN)
“ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.
ವಿಮೋಚನಕಾಂಡ 6 : 12 (IRVKN)
ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ [† ಇಬ್ರಿಯ ಭಾಷೆಯಲ್ಲಿ ಸುನ್ನತಿಯಿಲ್ಲದ ತುಟಿಗಳುಳ್ಳ ಮನುಷ್ಯನು.] ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
ವಿಮೋಚನಕಾಂಡ 6 : 13 (IRVKN)
ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. [PS]
ವಿಮೋಚನಕಾಂಡ 6 : 14 (IRVKN)
{ಮೋಶೆ ಮತ್ತು ಆರೋನರ ವಂಶಾವಳಿ} [PS] ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
ವಿಮೋಚನಕಾಂಡ 6 : 15 (IRVKN)
ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
ವಿಮೋಚನಕಾಂಡ 6 : 16 (IRVKN)
ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
ವಿಮೋಚನಕಾಂಡ 6 : 17 (IRVKN)
ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
ವಿಮೋಚನಕಾಂಡ 6 : 18 (IRVKN)
ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
ವಿಮೋಚನಕಾಂಡ 6 : 19 (IRVKN)
ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
ವಿಮೋಚನಕಾಂಡ 6 : 20 (IRVKN)
ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.
ವಿಮೋಚನಕಾಂಡ 6 : 21 (IRVKN)
ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
ವಿಮೋಚನಕಾಂಡ 6 : 22 (IRVKN)
ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
ವಿಮೋಚನಕಾಂಡ 6 : 23 (IRVKN)
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
ವಿಮೋಚನಕಾಂಡ 6 : 24 (IRVKN)
ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
ವಿಮೋಚನಕಾಂಡ 6 : 25 (IRVKN)
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
ವಿಮೋಚನಕಾಂಡ 6 : 26 (IRVKN)
ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
ವಿಮೋಚನಕಾಂಡ 6 : 27 (IRVKN)
ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. [PS]
ವಿಮೋಚನಕಾಂಡ 6 : 28 (IRVKN)
{ಮೋಶೆ ಆರೋನರು ದೇವರ ಆಜ್ಞೆಗೆ ವಿಧೇಯರಾದದ್ದು} [PS] ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ
ವಿಮೋಚನಕಾಂಡ 6 : 29 (IRVKN)
ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.
ವಿಮೋಚನಕಾಂಡ 6 : 30 (IRVKN)
ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: