ಯೆಹೆಜ್ಕೇಲನು 12 : 1 (IRVKN)
ಯೆಹೂದದ ನಾಶದ ಸೂಚನೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 12 : 2 (IRVKN)
“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.
ಯೆಹೆಜ್ಕೇಲನು 12 : 3 (IRVKN)
“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.
ಯೆಹೆಜ್ಕೇಲನು 12 : 4 (IRVKN)
ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
ಯೆಹೆಜ್ಕೇಲನು 12 : 5 (IRVKN)
ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
ಯೆಹೆಜ್ಕೇಲನು 12 : 6 (IRVKN)
ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”
ಯೆಹೆಜ್ಕೇಲನು 12 : 7 (IRVKN)
ಯೆಹೆಜ್ಕೇಲನು 12 : 8 (IRVKN)
ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು. ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 12 : 9 (IRVKN)
“ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
ಯೆಹೆಜ್ಕೇಲನು 12 : 10 (IRVKN)
ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
ಯೆಹೆಜ್ಕೇಲನು 12 : 11 (IRVKN)
ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.
ಯೆಹೆಜ್ಕೇಲನು 12 : 12 (IRVKN)
ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’
ಯೆಹೆಜ್ಕೇಲನು 12 : 13 (IRVKN)
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
ಯೆಹೆಜ್ಕೇಲನು 12 : 14 (IRVKN)
ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
ಯೆಹೆಜ್ಕೇಲನು 12 : 15 (IRVKN)
“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.
ಯೆಹೆಜ್ಕೇಲನು 12 : 16 (IRVKN)
ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”
ಯೆಹೆಜ್ಕೇಲನು 12 : 17 (IRVKN)
ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 12 : 18 (IRVKN)
“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.
ಯೆಹೆಜ್ಕೇಲನು 12 : 19 (IRVKN)
ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.
ಯೆಹೆಜ್ಕೇಲನು 12 : 20 (IRVKN)
ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ”
ಯೆಹೆಜ್ಕೇಲನು 12 : 21 (IRVKN)
ಯೆಹೂದ್ಯರ ಭರವಸೆಯ ಖಂಡನೆ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 12 : 22 (IRVKN)
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
ಯೆಹೆಜ್ಕೇಲನು 12 : 23 (IRVKN)
ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
ಯೆಹೆಜ್ಕೇಲನು 12 : 24 (IRVKN)
ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.
ಯೆಹೆಜ್ಕೇಲನು 12 : 25 (IRVKN)
ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’ ” ಇದು ಕರ್ತನಾದ ಯೆಹೋವನ ವಾಕ್ಯ.
ಯೆಹೆಜ್ಕೇಲನು 12 : 26 (IRVKN)
ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 12 : 27 (IRVKN)
“ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.
ಯೆಹೆಜ್ಕೇಲನು 12 : 28 (IRVKN)
“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28