ಯೆಹೆಜ್ಕೇಲನು 16 : 1 (IRVKN)
ಯೆರೂಸಲೇಮ್ ನಗರಿಯ ಪತಿದ್ರೋಹ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 16 : 2 (IRVKN)
“ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,
ಯೆಹೆಜ್ಕೇಲನು 16 : 3 (IRVKN)
ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
ಯೆಹೆಜ್ಕೇಲನು 16 : 4 (IRVKN)
ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.
ಯೆಹೆಜ್ಕೇಲನು 16 : 5 (IRVKN)
ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’
ಯೆಹೆಜ್ಕೇಲನು 16 : 6 (IRVKN)
“ ‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.
ಯೆಹೆಜ್ಕೇಲನು 16 : 7 (IRVKN)
‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.
ಯೆಹೆಜ್ಕೇಲನು 16 : 8 (IRVKN)
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’ ” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 16 : 9 (IRVKN)
“ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
ಯೆಹೆಜ್ಕೇಲನು 16 : 10 (IRVKN)
ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
ಯೆಹೆಜ್ಕೇಲನು 16 : 11 (IRVKN)
ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
ಯೆಹೆಜ್ಕೇಲನು 16 : 12 (IRVKN)
ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.
ಯೆಹೆಜ್ಕೇಲನು 16 : 13 (IRVKN)
ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
ಯೆಹೆಜ್ಕೇಲನು 16 : 14 (IRVKN)
ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 16 : 15 (IRVKN)
“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
ಯೆಹೆಜ್ಕೇಲನು 16 : 16 (IRVKN)
ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.
ಯೆಹೆಜ್ಕೇಲನು 16 : 17 (IRVKN)
ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.
ಯೆಹೆಜ್ಕೇಲನು 16 : 18 (IRVKN)
ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.
ಯೆಹೆಜ್ಕೇಲನು 16 : 19 (IRVKN)
ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 16 : 20 (IRVKN)
“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
ಯೆಹೆಜ್ಕೇಲನು 16 : 21 (IRVKN)
ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?
ಯೆಹೆಜ್ಕೇಲನು 16 : 22 (IRVKN)
ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
ಯೆಹೆಜ್ಕೇಲನು 16 : 23 (IRVKN)
ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 16 : 24 (IRVKN)
ಯೆರೂಸಲೇಮಿನ ವ್ಯಭಿಚಾರವನ್ನು ಖಂಡಿಸಿದ್ದು “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
ಯೆಹೆಜ್ಕೇಲನು 16 : 25 (IRVKN)
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
ಯೆಹೆಜ್ಕೇಲನು 16 : 26 (IRVKN)
ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.
ಯೆಹೆಜ್ಕೇಲನು 16 : 27 (IRVKN)
ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
ಯೆಹೆಜ್ಕೇಲನು 16 : 28 (IRVKN)
ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.
ಯೆಹೆಜ್ಕೇಲನು 16 : 29 (IRVKN)
ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”
ಯೆಹೆಜ್ಕೇಲನು 16 : 30 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
ಯೆಹೆಜ್ಕೇಲನು 16 : 31 (IRVKN)
ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.
ಯೆಹೆಜ್ಕೇಲನು 16 : 32 (IRVKN)
“ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
ಯೆಹೆಜ್ಕೇಲನು 16 : 33 (IRVKN)
ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
ಯೆಹೆಜ್ಕೇಲನು 16 : 34 (IRVKN)
ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”
ಯೆಹೆಜ್ಕೇಲನು 16 : 35 (IRVKN)
ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,
ಯೆಹೆಜ್ಕೇಲನು 16 : 36 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
ಯೆಹೆಜ್ಕೇಲನು 16 : 37 (IRVKN)
ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
ಯೆಹೆಜ್ಕೇಲನು 16 : 38 (IRVKN)
ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
ಯೆಹೆಜ್ಕೇಲನು 16 : 39 (IRVKN)
ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.
ಯೆಹೆಜ್ಕೇಲನು 16 : 40 (IRVKN)
ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
ಯೆಹೆಜ್ಕೇಲನು 16 : 41 (IRVKN)
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
ಯೆಹೆಜ್ಕೇಲನು 16 : 42 (IRVKN)
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
ಯೆಹೆಜ್ಕೇಲನು 16 : 43 (IRVKN)
ಯೆಹೆಜ್ಕೇಲನು 16 : 44 (IRVKN)
“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ. “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.
ಯೆಹೆಜ್ಕೇಲನು 16 : 45 (IRVKN)
ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
ಯೆಹೆಜ್ಕೇಲನು 16 : 46 (IRVKN)
ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
ಯೆಹೆಜ್ಕೇಲನು 16 : 47 (IRVKN)
ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”
ಯೆಹೆಜ್ಕೇಲನು 16 : 48 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.
ಯೆಹೆಜ್ಕೇಲನು 16 : 49 (IRVKN)
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
ಯೆಹೆಜ್ಕೇಲನು 16 : 50 (IRVKN)
ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
ಯೆಹೆಜ್ಕೇಲನು 16 : 51 (IRVKN)
ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
ಯೆಹೆಜ್ಕೇಲನು 16 : 52 (IRVKN)
ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
ಯೆಹೆಜ್ಕೇಲನು 16 : 53 (IRVKN)
“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
ಯೆಹೆಜ್ಕೇಲನು 16 : 54 (IRVKN)
ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
ಯೆಹೆಜ್ಕೇಲನು 16 : 55 (IRVKN)
ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
ಯೆಹೆಜ್ಕೇಲನು 16 : 56 (IRVKN)
ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
ಯೆಹೆಜ್ಕೇಲನು 16 : 57 (IRVKN)
ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.
ಯೆಹೆಜ್ಕೇಲನು 16 : 58 (IRVKN)
ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.
ಯೆಹೆಜ್ಕೇಲನು 16 : 59 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
ಯೆಹೆಜ್ಕೇಲನು 16 : 60 (IRVKN)
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
ಯೆಹೆಜ್ಕೇಲನು 16 : 61 (IRVKN)
ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
ಯೆಹೆಜ್ಕೇಲನು 16 : 62 (IRVKN)
ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
ಯೆಹೆಜ್ಕೇಲನು 16 : 63 (IRVKN)
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63