ಯೆಹೆಜ್ಕೇಲನು 18 : 1 (IRVKN)
ಕರ್ಮಫಲಾನುಭವದ ನ್ಯಾಯ ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 18 : 2 (IRVKN)
“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
ಯೆಹೆಜ್ಕೇಲನು 18 : 3 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
ಯೆಹೆಜ್ಕೇಲನು 18 : 4 (IRVKN)
ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
ಯೆಹೆಜ್ಕೇಲನು 18 : 5 (IRVKN)
“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,
ಯೆಹೆಜ್ಕೇಲನು 18 : 6 (IRVKN)
ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
ಯೆಹೆಜ್ಕೇಲನು 18 : 7 (IRVKN)
ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ಯೆಹೆಜ್ಕೇಲನು 18 : 8 (IRVKN)
ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
ಯೆಹೆಜ್ಕೇಲನು 18 : 9 (IRVKN)
ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 18 : 10 (IRVKN)
“ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
ಯೆಹೆಜ್ಕೇಲನು 18 : 11 (IRVKN)
ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
ಯೆಹೆಜ್ಕೇಲನು 18 : 12 (IRVKN)
ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
ಯೆಹೆಜ್ಕೇಲನು 18 : 13 (IRVKN)
ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
ಯೆಹೆಜ್ಕೇಲನು 18 : 14 (IRVKN)
ಯೆಹೆಜ್ಕೇಲನು 18 : 15 (IRVKN)
“ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ, “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
ಯೆಹೆಜ್ಕೇಲನು 18 : 16 (IRVKN)
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ಯೆಹೆಜ್ಕೇಲನು 18 : 17 (IRVKN)
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
ಯೆಹೆಜ್ಕೇಲನು 18 : 18 (IRVKN)
18 ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.
ಯೆಹೆಜ್ಕೇಲನು 18 : 19 (IRVKN)
“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.
ಯೆಹೆಜ್ಕೇಲನು 18 : 20 (IRVKN)
ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
ಯೆಹೆಜ್ಕೇಲನು 18 : 21 (IRVKN)
“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
ಯೆಹೆಜ್ಕೇಲನು 18 : 22 (IRVKN)
ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”
ಯೆಹೆಜ್ಕೇಲನು 18 : 23 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
ಯೆಹೆಜ್ಕೇಲನು 18 : 24 (IRVKN)
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
ಯೆಹೆಜ್ಕೇಲನು 18 : 25 (IRVKN)
“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
ಯೆಹೆಜ್ಕೇಲನು 18 : 26 (IRVKN)
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
ಯೆಹೆಜ್ಕೇಲನು 18 : 27 (IRVKN)
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
ಯೆಹೆಜ್ಕೇಲನು 18 : 28 (IRVKN)
ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
ಯೆಹೆಜ್ಕೇಲನು 18 : 29 (IRVKN)
ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
ಯೆಹೆಜ್ಕೇಲನು 18 : 30 (IRVKN)
ಯೆಹೆಜ್ಕೇಲನು 18 : 31 (IRVKN)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
ಯೆಹೆಜ್ಕೇಲನು 18 : 32 (IRVKN)
ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
❮
❯