ಯೆಹೆಜ್ಕೇಲನು 22 : 1 (IRVKN)
ಯೆರೂಸಲೇಮಿನ ಘೋರಪಾಪ
ಯೆಹೆಜ್ಕೇಲನು 22 : 2 (IRVKN)
ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,
ಯೆಹೆಜ್ಕೇಲನು 22 : 3 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!
ಯೆಹೆಜ್ಕೇಲನು 22 : 4 (IRVKN)
ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
ಯೆಹೆಜ್ಕೇಲನು 22 : 5 (IRVKN)
ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.
ಯೆಹೆಜ್ಕೇಲನು 22 : 6 (IRVKN)
“ ‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
ಯೆಹೆಜ್ಕೇಲನು 22 : 7 (IRVKN)
ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.
ಯೆಹೆಜ್ಕೇಲನು 22 : 8 (IRVKN)
ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.
ಯೆಹೆಜ್ಕೇಲನು 22 : 9 (IRVKN)
ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.
ಯೆಹೆಜ್ಕೇಲನು 22 : 10 (IRVKN)
ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
ಯೆಹೆಜ್ಕೇಲನು 22 : 11 (IRVKN)
ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.
ಯೆಹೆಜ್ಕೇಲನು 22 : 12 (IRVKN)
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 22 : 13 (IRVKN)
“ ‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
ಯೆಹೆಜ್ಕೇಲನು 22 : 14 (IRVKN)
ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
ಯೆಹೆಜ್ಕೇಲನು 22 : 15 (IRVKN)
ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
ಯೆಹೆಜ್ಕೇಲನು 22 : 16 (IRVKN)
ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’ ”
ಯೆಹೆಜ್ಕೇಲನು 22 : 17 (IRVKN)
ದೇವರ ಕುಲುಮೆ ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 22 : 18 (IRVKN)
“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
ಯೆಹೆಜ್ಕೇಲನು 22 : 19 (IRVKN)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.
ಯೆಹೆಜ್ಕೇಲನು 22 : 20 (IRVKN)
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.
ಯೆಹೆಜ್ಕೇಲನು 22 : 21 (IRVKN)
ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.
ಯೆಹೆಜ್ಕೇಲನು 22 : 22 (IRVKN)
ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’ ”
ಯೆಹೆಜ್ಕೇಲನು 22 : 23 (IRVKN)
ಯೆರೂಸಲೇಮಿನ ನಾಯಕರ ಪಾಪ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 22 : 24 (IRVKN)
“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
ಯೆಹೆಜ್ಕೇಲನು 22 : 25 (IRVKN)
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಯೆಹೆಜ್ಕೇಲನು 22 : 26 (IRVKN)
ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
ಯೆಹೆಜ್ಕೇಲನು 22 : 27 (IRVKN)
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
ಯೆಹೆಜ್ಕೇಲನು 22 : 28 (IRVKN)
ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.
ಯೆಹೆಜ್ಕೇಲನು 22 : 29 (IRVKN)
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
ಯೆಹೆಜ್ಕೇಲನು 22 : 30 (IRVKN)
“ ‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
ಯೆಹೆಜ್ಕೇಲನು 22 : 31 (IRVKN)
ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31