ಯೆಹೆಜ್ಕೇಲನು 23 : 1 (IRVKN)
{ವ್ಯಭಿಚಾರಿಯಾದ ಸಹೋದರಿಯರಿಬ್ಬರ ಸಾಮ್ಯ} [PS] ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 23 : 2 (IRVKN)
“ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.
ಯೆಹೆಜ್ಕೇಲನು 23 : 3 (IRVKN)
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.
ಯೆಹೆಜ್ಕೇಲನು 23 : 4 (IRVKN)
ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ. [PE][PS]
ಯೆಹೆಜ್ಕೇಲನು 23 : 5 (IRVKN)
“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
ಯೆಹೆಜ್ಕೇಲನು 23 : 6 (IRVKN)
ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
ಯೆಹೆಜ್ಕೇಲನು 23 : 7 (IRVKN)
ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
ಯೆಹೆಜ್ಕೇಲನು 23 : 8 (IRVKN)
ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು. [PE][PS]
ಯೆಹೆಜ್ಕೇಲನು 23 : 9 (IRVKN)
“ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
ಯೆಹೆಜ್ಕೇಲನು 23 : 10 (IRVKN)
ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.” [PE][PS]
ಯೆಹೆಜ್ಕೇಲನು 23 : 11 (IRVKN)
“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
ಯೆಹೆಜ್ಕೇಲನು 23 : 12 (IRVKN)
ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
ಯೆಹೆಜ್ಕೇಲನು 23 : 13 (IRVKN)
ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು. [PE][PS]
ಯೆಹೆಜ್ಕೇಲನು 23 : 14 (IRVKN)
“ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.
ಯೆಹೆಜ್ಕೇಲನು 23 : 15 (IRVKN)
ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
ಯೆಹೆಜ್ಕೇಲನು 23 : 16 (IRVKN)
ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.
ಯೆಹೆಜ್ಕೇಲನು 23 : 17 (IRVKN)
ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.
ಯೆಹೆಜ್ಕೇಲನು 23 : 18 (IRVKN)
ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
ಯೆಹೆಜ್ಕೇಲನು 23 : 19 (IRVKN)
ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು.
ಯೆಹೆಜ್ಕೇಲನು 23 : 20 (IRVKN)
ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.
ಯೆಹೆಜ್ಕೇಲನು 23 : 21 (IRVKN)
ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.” [PS]
ಯೆಹೆಜ್ಕೇಲನು 23 : 22 (IRVKN)
{ಒಹೊಲೀಬಳಿಗೆ ಆದ ಶಿಕ್ಷೆ} [PS] ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
ಯೆಹೆಜ್ಕೇಲನು 23 : 23 (IRVKN)
ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
ಯೆಹೆಜ್ಕೇಲನು 23 : 24 (IRVKN)
ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
ಯೆಹೆಜ್ಕೇಲನು 23 : 25 (IRVKN)
ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.
ಯೆಹೆಜ್ಕೇಲನು 23 : 26 (IRVKN)
ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
ಯೆಹೆಜ್ಕೇಲನು 23 : 27 (IRVKN)
ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.” [PE][PS]
ಯೆಹೆಜ್ಕೇಲನು 23 : 28 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
ಯೆಹೆಜ್ಕೇಲನು 23 : 29 (IRVKN)
ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು. [PE][PS]
ಯೆಹೆಜ್ಕೇಲನು 23 : 30 (IRVKN)
“ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.
ಯೆಹೆಜ್ಕೇಲನು 23 : 31 (IRVKN)
ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.” [QBR]
ಯೆಹೆಜ್ಕೇಲನು 23 : 32 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, [QBR] ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ. [QBR]
ಯೆಹೆಜ್ಕೇಲನು 23 : 33 (IRVKN)
ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. [QBR] ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ. [PE][PS]
ಯೆಹೆಜ್ಕೇಲನು 23 : 34 (IRVKN)
“ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ. [PE][PS]
ಯೆಹೆಜ್ಕೇಲನು 23 : 35 (IRVKN)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.” [PS]
ಯೆಹೆಜ್ಕೇಲನು 23 : 36 (IRVKN)
{ಸಹೋದರಿಯರಿಬ್ಬರಿಗೆ ಆದ ಶಿಕ್ಷೆ} [PS] ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
ಯೆಹೆಜ್ಕೇಲನು 23 : 37 (IRVKN)
ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.
ಯೆಹೆಜ್ಕೇಲನು 23 : 38 (IRVKN)
ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.
ಯೆಹೆಜ್ಕೇಲನು 23 : 39 (IRVKN)
ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ. [PE][PS]
ಯೆಹೆಜ್ಕೇಲನು 23 : 40 (IRVKN)
“ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
ಯೆಹೆಜ್ಕೇಲನು 23 : 41 (IRVKN)
ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. [PE][PS]
ಯೆಹೆಜ್ಕೇಲನು 23 : 42 (IRVKN)
“ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
ಯೆಹೆಜ್ಕೇಲನು 23 : 43 (IRVKN)
ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.
ಯೆಹೆಜ್ಕೇಲನು 23 : 44 (IRVKN)
ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.
ಯೆಹೆಜ್ಕೇಲನು 23 : 45 (IRVKN)
ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.” [PE][PS]
ಯೆಹೆಜ್ಕೇಲನು 23 : 46 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
ಯೆಹೆಜ್ಕೇಲನು 23 : 47 (IRVKN)
ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. [PE][PS]
ಯೆಹೆಜ್ಕೇಲನು 23 : 48 (IRVKN)
“ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.
ಯೆಹೆಜ್ಕೇಲನು 23 : 49 (IRVKN)
ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49

BG:

Opacity:

Color:


Size:


Font: