ಯೆಹೆಜ್ಕೇಲನು 24 : 1 (IRVKN)
{ಕಿಲುಬಿನ ಹಂಡೆಯ ಸಾಮ್ಯ} [PS] ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 24 : 2 (IRVKN)
“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ. [PE][PS]
ಯೆಹೆಜ್ಕೇಲನು 24 : 3 (IRVKN)
“ಈ ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, [QBR] ‘ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ; [QBR]
ಯೆಹೆಜ್ಕೇಲನು 24 : 4 (IRVKN)
ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, [QBR] ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು. [QBR]
ಯೆಹೆಜ್ಕೇಲನು 24 : 5 (IRVKN)
ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; [QBR] ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.’ ” [PE][PS]
ಯೆಹೆಜ್ಕೇಲನು 24 : 6 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನನಗೆ ಧಿಕ್ಕಾರ ಹಂಡೆಯಲ್ಲಿನ ಕಿಲುಬು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ಮಾಂಸವನ್ನು ತುಂಡು ತುಂಡಾಗಿ ತೆಗೆ. ಆಯ್ಕೆಯ ಚೀಟಿಯನ್ನು ಹಾಕಬೇಡ. [PE][PS]
ಯೆಹೆಜ್ಕೇಲನು 24 : 7 (IRVKN)
“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
ಯೆಹೆಜ್ಕೇಲನು 24 : 8 (IRVKN)
ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.” [PE][PS]
ಯೆಹೆಜ್ಕೇಲನು 24 : 9 (IRVKN)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
ಯೆಹೆಜ್ಕೇಲನು 24 : 10 (IRVKN)
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ. [PE][PS]
ಯೆಹೆಜ್ಕೇಲನು 24 : 11 (IRVKN)
“ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
ಯೆಹೆಜ್ಕೇಲನು 24 : 12 (IRVKN)
ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ. [PE][PS]
ಯೆಹೆಜ್ಕೇಲನು 24 : 13 (IRVKN)
“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.” [PE][PS]
ಯೆಹೆಜ್ಕೇಲನು 24 : 14 (IRVKN)
ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ. [PS]
ಯೆಹೆಜ್ಕೇಲನು 24 : 15 (IRVKN)
{ಯೆಹೆಜ್ಕೇಲನ ಪತ್ನಿ ವಿಯೋಗ} [PS] ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 24 : 16 (IRVKN)
“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.
ಯೆಹೆಜ್ಕೇಲನು 24 : 17 (IRVKN)
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು [* ಗಾರಿಗೆಯನ್ನು ಮೂಲ: ಮನುಷ್ಯರ ರೊಟ್ಟಿಯನ್ನು. ಹೋಶೇ. 9:4 ಅನ್ನು ನೋಡಿರಿ.] ತಿನ್ನಬೇಡ.” [PE][PS]
ಯೆಹೆಜ್ಕೇಲನು 24 : 18 (IRVKN)
ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.
ಯೆಹೆಜ್ಕೇಲನು 24 : 19 (IRVKN)
ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು, [PE][PS]
ಯೆಹೆಜ್ಕೇಲನು 24 : 20 (IRVKN)
ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.
ಯೆಹೆಜ್ಕೇಲನು 24 : 21 (IRVKN)
ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
ಯೆಹೆಜ್ಕೇಲನು 24 : 22 (IRVKN)
ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,
ಯೆಹೆಜ್ಕೇಲನು 24 : 23 (IRVKN)
ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
ಯೆಹೆಜ್ಕೇಲನು 24 : 24 (IRVKN)
ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ” [PE][PS]
ಯೆಹೆಜ್ಕೇಲನು 24 : 25 (IRVKN)
“ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
ಯೆಹೆಜ್ಕೇಲನು 24 : 26 (IRVKN)
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
ಯೆಹೆಜ್ಕೇಲನು 24 : 27 (IRVKN)
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು. [PE]
❮
❯