ಯೆಹೆಜ್ಕೇಲನು 30 : 1 (IRVKN)
ಐಗುಪ್ತಕ್ಕಾಗುವ ದಂಡನೆ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 30 : 2 (IRVKN)
“ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
ಯೆಹೆಜ್ಕೇಲನು 30 : 3 (IRVKN)
ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
ಯೆಹೆಜ್ಕೇಲನು 30 : 4 (IRVKN)
ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು* ಪ್ರಜೆಗಳು ಅಥವಾ ಆಸ್ತಿಪಾಸ್ತಿಗಳು. ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.
ಯೆಹೆಜ್ಕೇಲನು 30 : 5 (IRVKN)
ಯೆಹೆಜ್ಕೇಲನು 30 : 6 (IRVKN)
“ ‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’ ” ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 30 : 7 (IRVKN)
7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.
ಯೆಹೆಜ್ಕೇಲನು 30 : 8 (IRVKN)
“ ‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
ಯೆಹೆಜ್ಕೇಲನು 30 : 9 (IRVKN)
‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’ ”
ಯೆಹೆಜ್ಕೇಲನು 30 : 10 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
ಯೆಹೆಜ್ಕೇಲನು 30 : 11 (IRVKN)
ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
ಯೆಹೆಜ್ಕೇಲನು 30 : 12 (IRVKN)
ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
ಯೆಹೆಜ್ಕೇಲನು 30 : 13 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
ಯೆಹೆಜ್ಕೇಲನು 30 : 14 (IRVKN)
ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,
ಯೆಹೆಜ್ಕೇಲನು 30 : 15 (IRVKN)
“ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.
ಯೆಹೆಜ್ಕೇಲನು 30 : 16 (IRVKN)
ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.
ಯೆಹೆಜ್ಕೇಲನು 30 : 17 (IRVKN)
“ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
ಯೆಹೆಜ್ಕೇಲನು 30 : 18 (IRVKN)
ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
ಯೆಹೆಜ್ಕೇಲನು 30 : 19 (IRVKN)
ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
ಯೆಹೆಜ್ಕೇಲನು 30 : 20 (IRVKN)
ಐಗುಪ್ತದ ಅರಸನು ಸೋಲಿಸಲ್ಪಡುವನು ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 30 : 21 (IRVKN)
“ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
ಯೆಹೆಜ್ಕೇಲನು 30 : 22 (IRVKN)
ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.
ಯೆಹೆಜ್ಕೇಲನು 30 : 23 (IRVKN)
“ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.
ಯೆಹೆಜ್ಕೇಲನು 30 : 24 (IRVKN)
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
ಯೆಹೆಜ್ಕೇಲನು 30 : 25 (IRVKN)
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
ಯೆಹೆಜ್ಕೇಲನು 30 : 26 (IRVKN)
“ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”
❮
❯