ಯೆಹೆಜ್ಕೇಲನು 32 : 1 (IRVKN)
ಫರೋಹನಿಗಾಗಿ ಶೋಕ ಗೀತೆ (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ನೀನು ಐಗುಪ್ತದ
ಯೆಹೆಜ್ಕೇಲನು 32 : 2 (IRVKN)
ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’ ”
ಯೆಹೆಜ್ಕೇಲನು 32 : 3 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.
ಯೆಹೆಜ್ಕೇಲನು 32 : 4 (IRVKN)
ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
ಯೆಹೆಜ್ಕೇಲನು 32 : 5 (IRVKN)
ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.
ಯೆಹೆಜ್ಕೇಲನು 32 : 6 (IRVKN)
ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.
ಯೆಹೆಜ್ಕೇಲನು 32 : 7 (IRVKN)
ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.
ಯೆಹೆಜ್ಕೇಲನು 32 : 8 (IRVKN)
ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 32 : 9 (IRVKN)
“ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.
ಯೆಹೆಜ್ಕೇಲನು 32 : 10 (IRVKN)
ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”
ಯೆಹೆಜ್ಕೇಲನು 32 : 11 (IRVKN)
ಯೆಹೆಜ್ಕೇಲನು 32 : 12 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು. ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.
ಯೆಹೆಜ್ಕೇಲನು 32 : 13 (IRVKN)
ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ.
ಯೆಹೆಜ್ಕೇಲನು 32 : 14 (IRVKN)
ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 32 : 15 (IRVKN)
“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
ಯೆಹೆಜ್ಕೇಲನು 32 : 16 (IRVKN)
ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 32 : 17 (IRVKN)
ಫರೋಹನ ಪಾತಾಳಪ್ರವೇಶ
ಯೆಹೆಜ್ಕೇಲನು 32 : 18 (IRVKN)
(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
ಯೆಹೆಜ್ಕೇಲನು 32 : 19 (IRVKN)
ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.
ಯೆಹೆಜ್ಕೇಲನು 32 : 20 (IRVKN)
ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.
ಯೆಹೆಜ್ಕೇಲನು 32 : 21 (IRVKN)
ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.
ಯೆಹೆಜ್ಕೇಲನು 32 : 22 (IRVKN)
ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.
ಯೆಹೆಜ್ಕೇಲನು 32 : 23 (IRVKN)
ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.
ಯೆಹೆಜ್ಕೇಲನು 32 : 24 (IRVKN)
ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
ಯೆಹೆಜ್ಕೇಲನು 32 : 25 (IRVKN)
ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.
ಯೆಹೆಜ್ಕೇಲನು 32 : 26 (IRVKN)
ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.
ಯೆಹೆಜ್ಕೇಲನು 32 : 27 (IRVKN)
ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
ಯೆಹೆಜ್ಕೇಲನು 32 : 28 (IRVKN)
ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!
ಯೆಹೆಜ್ಕೇಲನು 32 : 29 (IRVKN)
29 ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.
ಯೆಹೆಜ್ಕೇಲನು 32 : 30 (IRVKN)
“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
ಯೆಹೆಜ್ಕೇಲನು 32 : 31 (IRVKN)
ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 32 : 32 (IRVKN)
“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32