ಯೆಹೆಜ್ಕೇಲನು 35 : 1 (IRVKN)
ಎದೋಮಿನ ಬಗ್ಗೆ ಪ್ರವಾದನೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 35 : 2 (IRVKN)
“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
ಯೆಹೆಜ್ಕೇಲನು 35 : 3 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
ಯೆಹೆಜ್ಕೇಲನು 35 : 4 (IRVKN)
ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
ಯೆಹೆಜ್ಕೇಲನು 35 : 5 (IRVKN)
“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
ಯೆಹೆಜ್ಕೇಲನು 35 : 6 (IRVKN)
ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’ ” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 35 : 7 (IRVKN)
“ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
ಯೆಹೆಜ್ಕೇಲನು 35 : 8 (IRVKN)
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.
ಯೆಹೆಜ್ಕೇಲನು 35 : 9 (IRVKN)
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
ಯೆಹೆಜ್ಕೇಲನು 35 : 10 (IRVKN)
ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
ಯೆಹೆಜ್ಕೇಲನು 35 : 11 (IRVKN)
“ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
ಯೆಹೆಜ್ಕೇಲನು 35 : 12 (IRVKN)
ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
ಯೆಹೆಜ್ಕೇಲನು 35 : 13 (IRVKN)
ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
ಯೆಹೆಜ್ಕೇಲನು 35 : 14 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
ಯೆಹೆಜ್ಕೇಲನು 35 : 15 (IRVKN)
ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”
❮
❯
1
2
3
4
5
6
7
8
9
10
11
12
13
14
15