ಯೆಹೆಜ್ಕೇಲನು 36 : 1 (IRVKN)
{ಇಸ್ರಾಯೇಲ್ಯರ ಮುಂದಿನ ಸೌಭಾಗ್ಯವೂ} [PS] “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.
ಯೆಹೆಜ್ಕೇಲನು 36 : 2 (IRVKN)
ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ” ಎಂದು ಹೇಳುವರು.
ಯೆಹೆಜ್ಕೇಲನು 36 : 3 (IRVKN)
ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “ ‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.
ಯೆಹೆಜ್ಕೇಲನು 36 : 4 (IRVKN)
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
ಯೆಹೆಜ್ಕೇಲನು 36 : 5 (IRVKN)
ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
ಯೆಹೆಜ್ಕೇಲನು 36 : 6 (IRVKN)
ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’
ಯೆಹೆಜ್ಕೇಲನು 36 : 7 (IRVKN)
ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.
ಯೆಹೆಜ್ಕೇಲನು 36 : 8 (IRVKN)
ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
ಯೆಹೆಜ್ಕೇಲನು 36 : 9 (IRVKN)
ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.
ಯೆಹೆಜ್ಕೇಲನು 36 : 10 (IRVKN)
ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
ಯೆಹೆಜ್ಕೇಲನು 36 : 11 (IRVKN)
ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
ಯೆಹೆಜ್ಕೇಲನು 36 : 12 (IRVKN)
ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’ ” [PE][PS]
ಯೆಹೆಜ್ಕೇಲನು 36 : 13 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.
ಯೆಹೆಜ್ಕೇಲನು 36 : 14 (IRVKN)
“ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.
ಯೆಹೆಜ್ಕೇಲನು 36 : 15 (IRVKN)
ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. [PE][PS]
ಯೆಹೆಜ್ಕೇಲನು 36 : 16 (IRVKN)
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಯೆಹೆಜ್ಕೇಲನು 36 : 17 (IRVKN)
“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.
ಯೆಹೆಜ್ಕೇಲನು 36 : 18 (IRVKN)
ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.
ಯೆಹೆಜ್ಕೇಲನು 36 : 19 (IRVKN)
ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.
ಯೆಹೆಜ್ಕೇಲನು 36 : 20 (IRVKN)
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
ಯೆಹೆಜ್ಕೇಲನು 36 : 21 (IRVKN)
ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.” [PE][PS]
ಯೆಹೆಜ್ಕೇಲನು 36 : 22 (IRVKN)
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
ಯೆಹೆಜ್ಕೇಲನು 36 : 23 (IRVKN)
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ. [PE][PS]
ಯೆಹೆಜ್ಕೇಲನು 36 : 24 (IRVKN)
“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
ಯೆಹೆಜ್ಕೇಲನು 36 : 25 (IRVKN)
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಯೆಹೆಜ್ಕೇಲನು 36 : 26 (IRVKN)
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
ಯೆಹೆಜ್ಕೇಲನು 36 : 27 (IRVKN)
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
ಯೆಹೆಜ್ಕೇಲನು 36 : 28 (IRVKN)
ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
ಯೆಹೆಜ್ಕೇಲನು 36 : 29 (IRVKN)
ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.
ಯೆಹೆಜ್ಕೇಲನು 36 : 30 (IRVKN)
ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
ಯೆಹೆಜ್ಕೇಲನು 36 : 31 (IRVKN)
ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
ಯೆಹೆಜ್ಕೇಲನು 36 : 32 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.” [PE][PS]
ಯೆಹೆಜ್ಕೇಲನು 36 : 33 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
ಯೆಹೆಜ್ಕೇಲನು 36 : 34 (IRVKN)
ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.
ಯೆಹೆಜ್ಕೇಲನು 36 : 35 (IRVKN)
ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.
ಯೆಹೆಜ್ಕೇಲನು 36 : 36 (IRVKN)
ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.” [PE][PS]
ಯೆಹೆಜ್ಕೇಲನು 36 : 37 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
ಯೆಹೆಜ್ಕೇಲನು 36 : 38 (IRVKN)
ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: