ಯೆಹೆಜ್ಕೇಲನು 42 : 1 (IRVKN)
ಯಾಜಕರ ಕೋಣೆಗಳು ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.
ಯೆಹೆಜ್ಕೇಲನು 42 : 2 (IRVKN)
ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.
ಯೆಹೆಜ್ಕೇಲನು 42 : 3 (IRVKN)
ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.
ಯೆಹೆಜ್ಕೇಲನು 42 : 4 (IRVKN)
ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.
ಯೆಹೆಜ್ಕೇಲನು 42 : 5 (IRVKN)
ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.
ಯೆಹೆಜ್ಕೇಲನು 42 : 6 (IRVKN)
ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.
ಯೆಹೆಜ್ಕೇಲನು 42 : 7 (IRVKN)
ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.
ಯೆಹೆಜ್ಕೇಲನು 42 : 8 (IRVKN)
ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು.
ಯೆಹೆಜ್ಕೇಲನು 42 : 9 (IRVKN)
ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು.
ಯೆಹೆಜ್ಕೇಲನು 42 : 10 (IRVKN)
ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.
ಯೆಹೆಜ್ಕೇಲನು 42 : 11 (IRVKN)
ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.
ಯೆಹೆಜ್ಕೇಲನು 42 : 12 (IRVKN)
ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
ಯೆಹೆಜ್ಕೇಲನು 42 : 13 (IRVKN)
ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು* ಕೋಣೆಗಳು ಯಾಜಕರ ಕೋಣೆಗಳು. ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.
ಯೆಹೆಜ್ಕೇಲನು 42 : 14 (IRVKN)
ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು.
ಯೆಹೆಜ್ಕೇಲನು 42 : 15 (IRVKN)
ದೇವಾಲಯದ ಸುತ್ತುಮುತ್ತಣ ಅಳತೆ ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.
ಯೆಹೆಜ್ಕೇಲನು 42 : 16 (IRVKN)
ಪೂರ್ವದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
ಯೆಹೆಜ್ಕೇಲನು 42 : 17 (IRVKN)
ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
ಯೆಹೆಜ್ಕೇಲನು 42 : 18 (IRVKN)
ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
ಯೆಹೆಜ್ಕೇಲನು 42 : 19 (IRVKN)
ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
ಯೆಹೆಜ್ಕೇಲನು 42 : 20 (IRVKN)
ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.

1 2 3 4 5 6 7 8 9 10 11 12 13 14 15 16 17 18 19 20