ಯೆಹೆಜ್ಕೇಲನು 45 : 1 (IRVKN)
{ದೇವರಿಗೆ ಮೀಸಲು ಭೂಮಿ} [PS] ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.
ಯೆಹೆಜ್ಕೇಲನು 45 : 2 (IRVKN)
ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.
ಯೆಹೆಜ್ಕೇಲನು 45 : 3 (IRVKN)
ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.
ಯೆಹೆಜ್ಕೇಲನು 45 : 4 (IRVKN)
ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.
ಯೆಹೆಜ್ಕೇಲನು 45 : 5 (IRVKN)
ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು. [PE][PS]
ಯೆಹೆಜ್ಕೇಲನು 45 : 6 (IRVKN)
ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು. [PS]
ಯೆಹೆಜ್ಕೇಲನು 45 : 7 (IRVKN)
{ರಾಜನ ಸ್ವತ್ತು} [PS] ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
ಯೆಹೆಜ್ಕೇಲನು 45 : 8 (IRVKN)
ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು. [PS]
ಯೆಹೆಜ್ಕೇಲನು 45 : 9 (IRVKN)
{ರಾಜನ ಕರ್ತವ್ಯ} [PS] ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 45 : 10 (IRVKN)
ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.
ಯೆಹೆಜ್ಕೇಲನು 45 : 11 (IRVKN)
ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.
ಯೆಹೆಜ್ಕೇಲನು 45 : 12 (IRVKN)
ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.” [PE][PS]
ಯೆಹೆಜ್ಕೇಲನು 45 : 13 (IRVKN)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.
ಯೆಹೆಜ್ಕೇಲನು 45 : 14 (IRVKN)
ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)
ಯೆಹೆಜ್ಕೇಲನು 45 : 15 (IRVKN)
ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.
ಯೆಹೆಜ್ಕೇಲನು 45 : 16 (IRVKN)
ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು.
ಯೆಹೆಜ್ಕೇಲನು 45 : 17 (IRVKN)
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. [PS]
ಯೆಹೆಜ್ಕೇಲನು 45 : 18 (IRVKN)
{ಪಸ್ಕ ಮತ್ತು ಪರ್ಣಶಾಲೆ ಹಬ್ಬಗಳ ಬಲಿಗಳು} [PS] ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
ಯೆಹೆಜ್ಕೇಲನು 45 : 19 (IRVKN)
ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.
ಯೆಹೆಜ್ಕೇಲನು 45 : 20 (IRVKN)
ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು. [PE][PS]
ಯೆಹೆಜ್ಕೇಲನು 45 : 21 (IRVKN)
“ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
ಯೆಹೆಜ್ಕೇಲನು 45 : 22 (IRVKN)
ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.
ಯೆಹೆಜ್ಕೇಲನು 45 : 23 (IRVKN)
ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.
ಯೆಹೆಜ್ಕೇಲನು 45 : 24 (IRVKN)
ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು. [PE][PS]
ಯೆಹೆಜ್ಕೇಲನು 45 : 25 (IRVKN)
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: