ಯೆಹೆಜ್ಕೇಲನು 8 : 1 (IRVKN)
{ದೇವಾಲಯದಲ್ಲಿನ ಅಸಹ್ಯ ಕಾರ್ಯಗಳು} [PS] ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
ಯೆಹೆಜ್ಕೇಲನು 8 : 2 (IRVKN)
ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
ಯೆಹೆಜ್ಕೇಲನು 8 : 3 (IRVKN)
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
ಯೆಹೆಜ್ಕೇಲನು 8 : 4 (IRVKN)
ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು. [PE][PS]
ಯೆಹೆಜ್ಕೇಲನು 8 : 5 (IRVKN)
ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು. [PE][PS]
ಯೆಹೆಜ್ಕೇಲನು 8 : 6 (IRVKN)
ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. [PE][PS]
ಯೆಹೆಜ್ಕೇಲನು 8 : 7 (IRVKN)
ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.
ಯೆಹೆಜ್ಕೇಲನು 8 : 8 (IRVKN)
ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು. [PE][PS]
ಯೆಹೆಜ್ಕೇಲನು 8 : 9 (IRVKN)
ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
ಯೆಹೆಜ್ಕೇಲನು 8 : 10 (IRVKN)
ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
ಯೆಹೆಜ್ಕೇಲನು 8 : 11 (IRVKN)
ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. [PE][PS]
ಯೆಹೆಜ್ಕೇಲನು 8 : 12 (IRVKN)
ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
ಯೆಹೆಜ್ಕೇಲನು 8 : 13 (IRVKN)
ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು. [PE][PS]
ಯೆಹೆಜ್ಕೇಲನು 8 : 14 (IRVKN)
ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್ [* ತಮ್ಮೂಜ್ ಪುರಾತನ ಮಧ್ಯ ಪ್ರಾಚ್ಯದಲ್ಲಿ, ತಮ್ಮೂಜ್ ಅನ್ನು ಸಸ್ಯವು ಸತ್ತಾಗ ಸಾಯುವಂಥ ದೇವರು ಎಂದು ಪರಿಗಣಿಸಲ್ಪಟ್ಟಿದ್ದನು, ಅವನು ಮುಂಬರುವ ವರ್ಷದಲ್ಲಿ ಮರಣದಿಂದ ಮತ್ತೆ ಎದ್ದುಬರುವನು ಎಂದು ಊಹಿಸಲಾಗಿತ್ತು, ಅವನ ಸಾವಿಗೆ ಸ್ತ್ರೀಯರು ದುಃಖಿಸುತ್ತಿದ್ದರು.] ” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
ಯೆಹೆಜ್ಕೇಲನು 8 : 15 (IRVKN)
ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. [PE][PS]
ಯೆಹೆಜ್ಕೇಲನು 8 : 16 (IRVKN)
ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. [PE][PS]
ಯೆಹೆಜ್ಕೇಲನು 8 : 17 (IRVKN)
ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
ಯೆಹೆಜ್ಕೇಲನು 8 : 18 (IRVKN)
ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.” [PE]

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: