ಎಜ್ರನು 10 : 1 (IRVKN)
ಪಾಪನಿವೇದನೆ ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
ಎಜ್ರನು 10 : 2 (IRVKN)
ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
ಎಜ್ರನು 10 : 3 (IRVKN)
ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.
ಎಜ್ರನು 10 : 4 (IRVKN)
ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.
ಎಜ್ರನು 10 : 5 (IRVKN)
ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.
ಎಜ್ರನು 10 : 6 (IRVKN)
ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
ಎಜ್ರನು 10 : 7 (IRVKN)
ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.
ಎಜ್ರನು 10 : 8 (IRVKN)
ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.
ಎಜ್ರನು 10 : 9 (IRVKN)
ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
ಎಜ್ರನು 10 : 10 (IRVKN)
ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.
ಎಜ್ರನು 10 : 11 (IRVKN)
ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.
ಎಜ್ರನು 10 : 12 (IRVKN)
ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.
ಎಜ್ರನು 10 : 13 (IRVKN)
ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
ಎಜ್ರನು 10 : 14 (IRVKN)
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
ಎಜ್ರನು 10 : 15 (IRVKN)
ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
ಎಜ್ರನು 10 : 16 (IRVKN)
ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
ಎಜ್ರನು 10 : 17 (IRVKN)
ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.
ಎಜ್ರನು 10 : 18 (IRVKN)
ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.
ಎಜ್ರನು 10 : 19 (IRVKN)
ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
ಎಜ್ರನು 10 : 20 (IRVKN)
ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ.
ಎಜ್ರನು 10 : 21 (IRVKN)
ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.
ಎಜ್ರನು 10 : 22 (IRVKN)
ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.
ಎಜ್ರನು 10 : 23 (IRVKN)
ಎಜ್ರನು 10 : 24 (IRVKN)
ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.
ಎಜ್ರನು 10 : 25 (IRVKN)
ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ. ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;
ಎಜ್ರನು 10 : 26 (IRVKN)
ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.
ಎಜ್ರನು 10 : 27 (IRVKN)
ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ.
ಎಜ್ರನು 10 : 28 (IRVKN)
ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.
ಎಜ್ರನು 10 : 29 (IRVKN)
ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
ಎಜ್ರನು 10 : 30 (IRVKN)
ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.
ಎಜ್ರನು 10 : 31 (IRVKN)
ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
ಎಜ್ರನು 10 : 32 (IRVKN)
ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.
ಎಜ್ರನು 10 : 33 (IRVKN)
ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.
ಎಜ್ರನು 10 : 34 (IRVKN)
ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್
ಎಜ್ರನು 10 : 35 (IRVKN)
ಬೆನಾಯ, ಬೇದೆಯ, ಕೆಲೂಹು,
ಎಜ್ರನು 10 : 36 (IRVKN)
ವನ್ಯಾಹ, ಮೆರೇಮೋತ್, ಎಲ್ಯಾಷೀಬ್,
ಎಜ್ರನು 10 : 37 (IRVKN)
ಮತ್ತನ್ಯ, ಮತ್ತೆನೈ, ಯಾಸೈ,
ಎಜ್ರನು 10 : 38 (IRVKN)
ಬಾನೀ, ಬಿನ್ನೂಯ್, ಶಿಮ್ಮೀ,
ಎಜ್ರನು 10 : 39 (IRVKN)
ಶೆಲೆಮ್ಯ, ನಾತಾನ್, ಅದಾಯ,
ಎಜ್ರನು 10 : 40 (IRVKN)
ಮಕ್ನದೆಬೈ, ಶಾಷೈ, ಶಾರೈ,
ಎಜ್ರನು 10 : 41 (IRVKN)
ಅಜರೇಲ್, ಶೆಲೆಮ್ಯ, ಶೆಮರ್ಯ,
ಎಜ್ರನು 10 : 42 (IRVKN)
ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.
ಎಜ್ರನು 10 : 43 (IRVKN)
ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.
ಎಜ್ರನು 10 : 44 (IRVKN)
ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. * ಆ ಸ್ತ್ರೀಯರನ್ನು ಅವರಲ್ಲಿ ಹುಟ್ಟಿದ್ದ ಮಕ್ಕಳನ್ನು ಕಳುಹಿಸಿಬಿಟ್ಟರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44