ಎಜ್ರನು 6 : 1 (IRVKN)
{ದಾರ್ಯಾವೆಷನ ರಾಜಾಜ್ಞೆ} [PS] ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.
ಎಜ್ರನು 6 : 2 (IRVKN)
ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. [PE][PS]
ಎಜ್ರನು 6 : 3 (IRVKN)
ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
ಎಜ್ರನು 6 : 4 (IRVKN)
ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.
ಎಜ್ರನು 6 : 5 (IRVKN)
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು. [PE][PS]
ಎಜ್ರನು 6 : 6 (IRVKN)
“ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.
ಎಜ್ರನು 6 : 7 (IRVKN)
ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.
ಎಜ್ರನು 6 : 8 (IRVKN)
ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.
ಎಜ್ರನು 6 : 9 (IRVKN)
ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.
ಎಜ್ರನು 6 : 10 (IRVKN)
ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
ಎಜ್ರನು 6 : 11 (IRVKN)
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
ಎಜ್ರನು 6 : 12 (IRVKN)
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು. [PS]
ಎಜ್ರನು 6 : 13 (IRVKN)
{ದೇವಾಲಯದ ಪ್ರತಿಷ್ಠೆ} [PS] ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.
ಎಜ್ರನು 6 : 14 (IRVKN)
ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.
ಎಜ್ರನು 6 : 15 (IRVKN)
ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
ಎಜ್ರನು 6 : 16 (IRVKN)
ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. [PE][PS]
ಎಜ್ರನು 6 : 17 (IRVKN)
ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
ಎಜ್ರನು 6 : 18 (IRVKN)
ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು. [PE][PS]
ಎಜ್ರನು 6 : 19 (IRVKN)
ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.
ಎಜ್ರನು 6 : 20 (IRVKN)
ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.
ಎಜ್ರನು 6 : 21 (IRVKN)
ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.
ಎಜ್ರನು 6 : 22 (IRVKN)
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು [* ಅಶ್ಶೂರದ ಅರಸನು ಇದು ಪಾರಸಿಯ ಅರಸನು ಅಶ್ಶೂರ ಅರಸರ ಉತ್ತರಾಧಿಕಾರಿಯಾಗಿದ್ದನ್ನು ಸೂಚಿಸುತ್ತದೆ, ಅವರ ಸಾಮ್ರಾಜ್ಯವನ್ನು ಮೊದಲು ಬಾಬಿಲೋನಿಯದವರು ನಂತರ ಪಾರಸಿಯವರು ಉತ್ತರಾಧಿಕಾರದಿಂದ ಪಡೆದುಕೊಂಡರು.] ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: