ಎಜ್ರನು 8 : 1 (IRVKN)
ಎಜ್ರನೊಂದಿಗೆ ಬಾಬಿಲೋನಿನಿಂದ ಹಿಂದಿರುಗಿದವರ ಪಟ್ಟಿ
ಎಜ್ರನು 8 : 2 (IRVKN)
ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.
ಎಜ್ರನು 8 : 3 (IRVKN)
ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.
ಎಜ್ರನು 8 : 4 (IRVKN)
ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
ಎಜ್ರನು 8 : 5 (IRVKN)
ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.
ಎಜ್ರನು 8 : 6 (IRVKN)
ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.
ಎಜ್ರನು 8 : 7 (IRVKN)
ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು.
ಎಜ್ರನು 8 : 8 (IRVKN)
ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು.
ಎಜ್ರನು 8 : 9 (IRVKN)
ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.
ಎಜ್ರನು 8 : 10 (IRVKN)
ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.
ಎಜ್ರನು 8 : 11 (IRVKN)
ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು.
ಎಜ್ರನು 8 : 12 (IRVKN)
ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು.
ಎಜ್ರನು 8 : 13 (IRVKN)
ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.
ಎಜ್ರನು 8 : 14 (IRVKN)
ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.
ಎಜ್ರನು 8 : 15 (IRVKN)
ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
ಎಜ್ರನು 8 : 16 (IRVKN)
ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.
ಎಜ್ರನು 8 : 17 (IRVKN)
ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
ಎಜ್ರನು 8 : 18 (IRVKN)
ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
ಎಜ್ರನು 8 : 19 (IRVKN)
ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,
ಎಜ್ರನು 8 : 20 (IRVKN)
ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
ಎಜ್ರನು 8 : 21 (IRVKN)
ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
ಎಜ್ರನು 8 : 22 (IRVKN)
ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
ಎಜ್ರನು 8 : 23 (IRVKN)
ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
ಎಜ್ರನು 8 : 24 (IRVKN)
ದೇವಾಲಯಕ್ಕೆ ಸಲ್ಲಿಸಿದ ಕಾಣಿಕೆಗಳು ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು
ಎಜ್ರನು 8 : 25 (IRVKN)
ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
ಎಜ್ರನು 8 : 26 (IRVKN)
ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,
ಎಜ್ರನು 8 : 27 (IRVKN)
ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು* ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು ಅಂದರೆ 8.5 ಕಿಲೋಗ್ರಾಂ. ; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
ಎಜ್ರನು 8 : 28 (IRVKN)
ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
ಎಜ್ರನು 8 : 29 (IRVKN)
ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.
ಎಜ್ರನು 8 : 30 (IRVKN)
ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
ಎಜ್ರನು 8 : 31 (IRVKN)
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
ಎಜ್ರನು 8 : 32 (IRVKN)
ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.
ಎಜ್ರನು 8 : 33 (IRVKN)
ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
ಎಜ್ರನು 8 : 34 (IRVKN)
ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
ಎಜ್ರನು 8 : 35 (IRVKN)
ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
ಎಜ್ರನು 8 : 36 (IRVKN)
ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36