ಗಲಾತ್ಯದವರಿಗೆ 2 : 1 (IRVKN)
ಪೌಲನನ್ನು ಇತರ ಅಪೊಸ್ತಲರು ಅಂಗೀಕರಿಸಿದ್ದು * ಅ. ಕೃ. 15:2 ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.
ಗಲಾತ್ಯದವರಿಗೆ 2 : 2 (IRVKN)
ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, † 1 ತಿಮೊ. 3:16 ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ‡ ಗಲಾ. 2:6-9 ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು § ಮೂಲ: ಓಡುತ್ತಿರುವುದು ಅಥವಾ ಓಡಿದ್ದು. ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.
ಗಲಾತ್ಯದವರಿಗೆ 2 : 3 (IRVKN)
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ * ಅ. ಕೃ. 16:3 ಹೋಲಿಸಿ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
ಗಲಾತ್ಯದವರಿಗೆ 2 : 4 (IRVKN)
† ಅ. ಕೃ. 15:24, 2 ಕೊರಿ 11:26 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ‡ ಗಲಾ. 4:3,9; 9:24-25, 2 ಕೊರಿ 11:20, ರೋಮಾ. 8:15 ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ § ಗಲಾ. 5:1 ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
ಗಲಾತ್ಯದವರಿಗೆ 2 : 5 (IRVKN)
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
ಗಲಾತ್ಯದವರಿಗೆ 2 : 6 (IRVKN)
ಆದರೆ * ವ. 29 ನೋಡಿರಿ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. † ಧರ್ಮೋ 10:17, ರೋಮಾ. 2:11 ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ‡ 2 ಕೊರಿ 11:5, 12:11 ನನಗೇನನ್ನೂ ತಿಳಿಸಿಕೊಡಲಿಲ್ಲ.
ಗಲಾತ್ಯದವರಿಗೆ 2 : 7 (IRVKN)
ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, § ಗಲಾ. 1:16, ಅ. ಕೃ. 9:15, ಥೆಸ. 2:4, 1 ತಿಮೊ. 1:11 ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.
ಗಲಾತ್ಯದವರಿಗೆ 2 : 8 (IRVKN)
ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
ಗಲಾತ್ಯದವರಿಗೆ 2 : 9 (IRVKN)
* ಯೆರೆ 1:18, ಪ್ರಕ 3:12 ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, † 2 ಪೇತ್ರ. 3:15 ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
ಗಲಾತ್ಯದವರಿಗೆ 2 : 10 (IRVKN)
ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ‡ ಅ. ಕೃ. 24:17 ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
ಗಲಾತ್ಯದವರಿಗೆ 2 : 11 (IRVKN)
ಪೌಲನು ಅಂತಿಯೋಕ್ಯದಲ್ಲಿ ಪೇತ್ರನನ್ನು ಖಂಡಿಸಿದ್ದು § ಅ. ಕೃ. 15:1,35 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
ಗಲಾತ್ಯದವರಿಗೆ 2 : 12 (IRVKN)
ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು * ಅ. ಕೃ. 11:3, ಲೂಕ 15:2 ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ † ಅ. ಕೃ. 11:2 ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
ಗಲಾತ್ಯದವರಿಗೆ 2 : 13 (IRVKN)
ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
ಗಲಾತ್ಯದವರಿಗೆ 2 : 14 (IRVKN)
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ‡ ವ. 12 ನೋಡಿರಿ ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
ಗಲಾತ್ಯದವರಿಗೆ 2 : 15 (IRVKN)
ಯೆಹೂದ್ಯರಂತೆ ಅನ್ಯಜನರು ಸಹ ನಂಬಿಕೆಯಿಂದ ರಕ್ಷಣೆಹೊಂದಿದ್ದಾರೆ ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”
ಗಲಾತ್ಯದವರಿಗೆ 2 : 16 (IRVKN)
ಯಾವನಾದರೂ § ರೋಮಾ. 9:30 ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ * ಗಲಾ. 3:11, ಅ. ಕೃ. 13:39 ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ † ಕೀರ್ತ 143:2, ರೋಮಾ. 3:20 ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಗಲಾತ್ಯದವರಿಗೆ 2 : 17 (IRVKN)
ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
ಗಲಾತ್ಯದವರಿಗೆ 2 : 18 (IRVKN)
ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
ಗಲಾತ್ಯದವರಿಗೆ 2 : 19 (IRVKN)
ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
ಗಲಾತ್ಯದವರಿಗೆ 2 : 20 (IRVKN)
ನಾನು ಸಹ ‡ ಗಲಾ. 5:24, 6:14, ರೋಮಾ. 6:6 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, § ಯೋಹಾ 17:23 ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. * ರೋಮಾ. 8:37 ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಗಲಾತ್ಯದವರಿಗೆ 2 : 21 (IRVKN)
ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. † ಗಲಾ. 3:21, ಇಬ್ರಿ. 7:11 ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21