ಗಲಾತ್ಯದವರಿಗೆ 3 : 1 (IRVKN)
ಧರ್ಮಶಾಸ್ತ್ರವೋ ಅಥವಾ ನಂಬಿಕೆಯೋ ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು * 1 ಕೊರಿ 1:23; ಅರಣ್ಯ 21:9 ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
ಗಲಾತ್ಯದವರಿಗೆ 3 : 2 (IRVKN)
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. † ಗಲಾ. 3:14; ಎಫೆ 1:13; ಇಬ್ರಿ. 6:4; ಅ. ಕೃ. 15:8 ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ‡ ರೋಮಾ. 10:17 ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
ಗಲಾತ್ಯದವರಿಗೆ 3 : 3 (IRVKN)
ನೀವು ಇಷ್ಟು ಬುದ್ಧಿಯಿಲ್ಲದವರೋ? § ಫಿಲಿ. 1:6; ಗಲಾ. 4:9 ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?
ಗಲಾತ್ಯದವರಿಗೆ 3 : 4 (IRVKN)
* ಇಬ್ರಿ. 10:35; 2 ಯೋಹಾ 8 ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
ಗಲಾತ್ಯದವರಿಗೆ 3 : 5 (IRVKN)
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, † ವ. 12 ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
ಗಲಾತ್ಯದವರಿಗೆ 3 : 6 (IRVKN)
‡ ಆದಿ 12:3; 18:18 ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
ಗಲಾತ್ಯದವರಿಗೆ 3 : 7 (IRVKN)
ಆದ್ದರಿಂದ § ವ. 9 ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
ಗಲಾತ್ಯದವರಿಗೆ 3 : 8 (IRVKN)
* ರೋಮಾ. 3:30 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, † ಆದಿ 12:3; 18:18 “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಗಲಾತ್ಯದವರಿಗೆ 3 : 9 (IRVKN)
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
ಗಲಾತ್ಯದವರಿಗೆ 3 : 10 (IRVKN)
‡ ಗಲಾ. 5:4; ರೋಮಾ. 1:17; ಇಬ್ರಿ. 10:38 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, § ಧರ್ಮೋ 27:26; ಯೆರೆ 11:3 “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಗಲಾತ್ಯದವರಿಗೆ 3 : 11 (IRVKN)
ಇದಲ್ಲದೆ * ಗಲಾ. 2:16 ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ † ಹಬ 2:4; ರೋಮಾ. 1:17; ಇಬ್ರಿ. 10:38 “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
ಗಲಾತ್ಯದವರಿಗೆ 3 : 12 (IRVKN)
ಗಲಾತ್ಯದವರಿಗೆ 3 : 13 (IRVKN)
ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, ‡ ಯಾಜ 18:5; ರೋಮಾ. 10:5 “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
ಗಲಾತ್ಯದವರಿಗೆ 3 : 14 (IRVKN)
ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ § ಗಲಾ. 4:5 ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ * ಧರ್ಮೋ 21:23 “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ಗಲಾತ್ಯದವರಿಗೆ 3 : 15 (IRVKN)
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ † ರೋಮಾ. 4:9,16 ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ‡ ಅ. ಕೃ. 2:33; ಯೆಶಾ 32:15; 44:3; ಯೋವೇ. 2:28; ಯೋಹಾ 7:39; ಎಫೆ 1:13 ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ § ವ. 2 ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು. ಧರ್ಮಶಾಸ್ತ್ರವು ಹಾಗೂ ವಾಗ್ದಾನವು ಸಹೋದರರೇ, * ರೋಮಾ. 3:5 ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ † ಇಬ್ರಿ. 9:17 ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
ಗಲಾತ್ಯದವರಿಗೆ 3 : 16 (IRVKN)
ಹಾಗೆಯೇ, ‡ ರೋಮಾ. 4:13, 16; ಲೂಕ 1:55; ಅ. ಕೃ. 13:32 ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. § ಆದಿ 12:7; 13:15; 17:7,8; 22:18 ಆ ಒಬ್ಬನು ಕ್ರಿಸ್ತನೇ.
ಗಲಾತ್ಯದವರಿಗೆ 3 : 17 (IRVKN)
ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, * ವಿಮೋ 12:40,41; ಆದಿ 15:13; ಅ. ಕೃ. 7:6 ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
ಗಲಾತ್ಯದವರಿಗೆ 3 : 18 (IRVKN)
ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. † ಇಬ್ರಿ. 6:13,14 ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
ಗಲಾತ್ಯದವರಿಗೆ 3 : 19 (IRVKN)
ಗಲಾತ್ಯದವರಿಗೆ 3 : 20 (IRVKN)
ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ‡ ವ. 16 ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಗಲಾತ್ಯದವರಿಗೆ 3 : 21 (IRVKN)
ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ. ದಾಸರು ಹಾಗೂ ಮಕ್ಕಳು ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
ಗಲಾತ್ಯದವರಿಗೆ 3 : 22 (IRVKN)
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
ಗಲಾತ್ಯದವರಿಗೆ 3 : 23 (IRVKN)
ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ § 1 ಪೇತ್ರ 1:5 ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ * ನೇಮನಿಷ್ಠೆಗಳ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
ಗಲಾತ್ಯದವರಿಗೆ 3 : 24 (IRVKN)
† ಗಲಾ. 3:11; 2:16 ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
ಗಲಾತ್ಯದವರಿಗೆ 3 : 25 (IRVKN)
ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
ಗಲಾತ್ಯದವರಿಗೆ 3 : 26 (IRVKN)
ಹಾಗೆ ‡ ಗಲಾ. 4:5,6 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಗಲಾತ್ಯದವರಿಗೆ 3 : 27 (IRVKN)
ಹೇಗೆಂದರೆ § ರೋಮಾ. 6:3 ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ * ರೋಮಾ. 13:14 ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ಗಲಾತ್ಯದವರಿಗೆ 3 : 28 (IRVKN)
† ಯೋಹಾ 10:16; 17:11; 1 ಕೊರಿ 10:17; ಎಫೆ 2:14-16; 4:4 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ‡ ಗಲಾ. 3:14; 5:6; 6:15; ರೋಮಾ. 3:30; 8:17; ಎಫೆ 3:6 ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, § 1 ಕೊರಿ 11:11 ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಗಲಾತ್ಯದವರಿಗೆ 3 : 29 (IRVKN)
* 1 ಕೊರಿ 3:23 ನೀವು ಕ್ರಿಸ್ತನವರಾಗಿದ್ದರೆ † ರೋಮಾ. 9:7 ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ‡ ಗಲಾ. 4:1,7; ರೋಮಾ. 8:17; ಎಫೆ 3:6 ಬಾಧ್ಯರೂ ಆಗಿದ್ದೀರಿ.
❮
❯