ಗಲಾತ್ಯದವರಿಗೆ 3 : 1 (IRVKN)
{#1ಧರ್ಮಶಾಸ್ತ್ರವೋ ಅಥವಾ ನಂಬಿಕೆಯೋ } [PS]ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು [* 1 ಕೊರಿ 1:23; ಅರಣ್ಯ 21:9 ]ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
ಗಲಾತ್ಯದವರಿಗೆ 3 : 2 (IRVKN)
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. [† ಗಲಾ. 3:14; ಎಫೆ 1:13; ಇಬ್ರಿ. 6:4; ಅ. ಕೃ. 15:8 ]ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ [‡ ರೋಮಾ. 10:17 ]ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
ಗಲಾತ್ಯದವರಿಗೆ 3 : 3 (IRVKN)
ನೀವು ಇಷ್ಟು ಬುದ್ಧಿಯಿಲ್ಲದವರೋ? [§ ಫಿಲಿ. 1:6; ಗಲಾ. 4:9 ]ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ? [PE]
ಗಲಾತ್ಯದವರಿಗೆ 3 : 4 (IRVKN)
[PS] [* ಇಬ್ರಿ. 10:35; 2 ಯೋಹಾ 8 ]ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
ಗಲಾತ್ಯದವರಿಗೆ 3 : 5 (IRVKN)
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, [† ವ. 12 ]ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ? [PE]
ಗಲಾತ್ಯದವರಿಗೆ 3 : 6 (IRVKN)
[PS] [‡ ಆದಿ 12:3; 18:18 ]ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
ಗಲಾತ್ಯದವರಿಗೆ 3 : 7 (IRVKN)
ಆದ್ದರಿಂದ [§ ವ. 9 ]ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ. [PE]
ಗಲಾತ್ಯದವರಿಗೆ 3 : 8 (IRVKN)
[PS] [* ರೋಮಾ. 3:30 ]ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, [† ಆದಿ 12:3; 18:18 ]“ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಗಲಾತ್ಯದವರಿಗೆ 3 : 9 (IRVKN)
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. [PE]
ಗಲಾತ್ಯದವರಿಗೆ 3 : 10 (IRVKN)
[PS] [‡ ಗಲಾ. 5:4; ರೋಮಾ. 1:17; ಇಬ್ರಿ. 10:38 ]ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, [§ ಧರ್ಮೋ 27:26; ಯೆರೆ 11:3 ]“ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಗಲಾತ್ಯದವರಿಗೆ 3 : 11 (IRVKN)
ಇದಲ್ಲದೆ [* ಗಲಾ. 2:16 ]ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ [† ಹಬ 2:4; ರೋಮಾ. 1:17; ಇಬ್ರಿ. 10:38 ]“ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. [PE]
ಗಲಾತ್ಯದವರಿಗೆ 3 : 12 (IRVKN)
ಗಲಾತ್ಯದವರಿಗೆ 3 : 13 (IRVKN)
[PS]ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, [‡ ಯಾಜ 18:5; ರೋಮಾ. 10:5 ]“ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ. [PE]
ಗಲಾತ್ಯದವರಿಗೆ 3 : 14 (IRVKN)
[PS]ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ [§ ಗಲಾ. 4:5 ]ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ [* ಧರ್ಮೋ 21:23 ]“ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ. [PE]
ಗಲಾತ್ಯದವರಿಗೆ 3 : 15 (IRVKN)
[PS]ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ [† ರೋಮಾ. 4:9,16 ]ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು [‡ ಅ. ಕೃ. 2:33; ಯೆಶಾ 32:15; 44:3; ಯೋವೇ. 2:28; ಯೋಹಾ 7:39; ಎಫೆ 1:13 ]ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ [§ ವ. 2 ]ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು. [PE]{#1ಧರ್ಮಶಾಸ್ತ್ರವು ಹಾಗೂ ವಾಗ್ದಾನವು } [PS]ಸಹೋದರರೇ, [* ರೋಮಾ. 3:5 ]ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ [† ಇಬ್ರಿ. 9:17 ]ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
ಗಲಾತ್ಯದವರಿಗೆ 3 : 16 (IRVKN)
ಹಾಗೆಯೇ, [‡ ರೋಮಾ. 4:13, 16; ಲೂಕ 1:55; ಅ. ಕೃ. 13:32 ]ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. [§ ಆದಿ 12:7; 13:15; 17:7,8; 22:18 ]ಆ ಒಬ್ಬನು ಕ್ರಿಸ್ತನೇ. [PE]
ಗಲಾತ್ಯದವರಿಗೆ 3 : 17 (IRVKN)
[PS]ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, [* ವಿಮೋ 12:40,41; ಆದಿ 15:13; ಅ. ಕೃ. 7:6 ]ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
ಗಲಾತ್ಯದವರಿಗೆ 3 : 18 (IRVKN)
ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. [† ಇಬ್ರಿ. 6:13,14 ]ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. [PE]
ಗಲಾತ್ಯದವರಿಗೆ 3 : 19 (IRVKN)
ಗಲಾತ್ಯದವರಿಗೆ 3 : 20 (IRVKN)
[PS]ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು [‡ ವ. 16 ]ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. [PE]
ಗಲಾತ್ಯದವರಿಗೆ 3 : 21 (IRVKN)
[PS]ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ. [PE]{#1ದಾಸರು ಹಾಗೂ ಮಕ್ಕಳು } [PS]ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
ಗಲಾತ್ಯದವರಿಗೆ 3 : 22 (IRVKN)
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. [PE]
ಗಲಾತ್ಯದವರಿಗೆ 3 : 23 (IRVKN)
[PS]ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ [§ 1 ಪೇತ್ರ 1:5 ]ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ [* ನೇಮನಿಷ್ಠೆಗಳ ]ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
ಗಲಾತ್ಯದವರಿಗೆ 3 : 24 (IRVKN)
[† ಗಲಾ. 3:11; 2:16 ]ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
ಗಲಾತ್ಯದವರಿಗೆ 3 : 25 (IRVKN)
ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
ಗಲಾತ್ಯದವರಿಗೆ 3 : 26 (IRVKN)
ಹಾಗೆ [‡ ಗಲಾ. 4:5,6 ]ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. [PE]
ಗಲಾತ್ಯದವರಿಗೆ 3 : 27 (IRVKN)
[PS]ಹೇಗೆಂದರೆ [§ ರೋಮಾ. 6:3 ]ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ [* ರೋಮಾ. 13:14 ]ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ಗಲಾತ್ಯದವರಿಗೆ 3 : 28 (IRVKN)
[† ಯೋಹಾ 10:16; 17:11; 1 ಕೊರಿ 10:17; ಎಫೆ 2:14-16; 4:4 ]ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ [‡ ಗಲಾ. 3:14; 5:6; 6:15; ರೋಮಾ. 3:30; 8:17; ಎಫೆ 3:6 ]ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, [§ 1 ಕೊರಿ 11:11 ]ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಗಲಾತ್ಯದವರಿಗೆ 3 : 29 (IRVKN)
[* 1 ಕೊರಿ 3:23 ]ನೀವು ಕ್ರಿಸ್ತನವರಾಗಿದ್ದರೆ [† ರೋಮಾ. 9:7 ]ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ [‡ ಗಲಾ. 4:1,7; ರೋಮಾ. 8:17; ಎಫೆ 3:6 ]ಬಾಧ್ಯರೂ ಆಗಿದ್ದೀರಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: