ಆದಿಕಾಂಡ 12 : 1 (IRVKN)
ದೇವರು ಅಬ್ರಾಮನನ್ನು ಕರೆದದ್ದು ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, * ಅಥವಾ ಜನ್ಮಸ್ಥಳದಿಂದ. ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
ಆದಿಕಾಂಡ 12 : 2 (IRVKN)
ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
ಆದಿಕಾಂಡ 12 : 3 (IRVKN)
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
ಆದಿಕಾಂಡ 12 : 4 (IRVKN)
ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
ಆದಿಕಾಂಡ 12 : 5 (IRVKN)
ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
ಆದಿಕಾಂಡ 12 : 6 (IRVKN)
ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
ಆದಿಕಾಂಡ 12 : 7 (IRVKN)
ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
ಆದಿಕಾಂಡ 12 : 8 (IRVKN)
ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
ಆದಿಕಾಂಡ 12 : 9 (IRVKN)
ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.
ಆದಿಕಾಂಡ 12 : 10 (IRVKN)
ಅಬ್ರಾಮನು ಮತ್ತು ಸಾರಳು ಐಗುಪ್ತ ದೇಶದಲ್ಲಿ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
ಆದಿಕಾಂಡ 12 : 11 (IRVKN)
ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
ಆದಿಕಾಂಡ 12 : 12 (IRVKN)
ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.
ಆದಿಕಾಂಡ 12 : 13 (IRVKN)
ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
ಆದಿಕಾಂಡ 12 : 14 (IRVKN)
ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.
ಆದಿಕಾಂಡ 12 : 15 (IRVKN)
ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
ಆದಿಕಾಂಡ 12 : 16 (IRVKN)
ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
ಆದಿಕಾಂಡ 12 : 17 (IRVKN)
ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.
ಆದಿಕಾಂಡ 12 : 18 (IRVKN)
ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?
ಆದಿಕಾಂಡ 12 : 19 (IRVKN)
ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,
ಆದಿಕಾಂಡ 12 : 20 (IRVKN)
ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.

1 2 3 4 5 6 7 8 9 10 11 12 13 14 15 16 17 18 19 20