ಆದಿಕಾಂಡ 13 : 1 (IRVKN)
{ಅಬ್ರಾಮನು ಲೋಟನನ್ನು ಅಗಲಿದ್ದು} [PS] ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
ಆದಿಕಾಂಡ 13 : 2 (IRVKN)
ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. [PE][PS]
ಆದಿಕಾಂಡ 13 : 3 (IRVKN)
ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ
ಆದಿಕಾಂಡ 13 : 4 (IRVKN)
ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
ಆದಿಕಾಂಡ 13 : 5 (IRVKN)
ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, [* ಗುಡಾರಗಳು.] ಕುಟುಂಬಗಳು ಇದ್ದವು.
ಆದಿಕಾಂಡ 13 : 6 (IRVKN)
ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.
ಆದಿಕಾಂಡ 13 : 7 (IRVKN)
ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. [PE][PS]
ಆದಿಕಾಂಡ 13 : 8 (IRVKN)
ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
ಆದಿಕಾಂಡ 13 : 9 (IRVKN)
ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. [PE][PS]
ಆದಿಕಾಂಡ 13 : 10 (IRVKN)
ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
ಆದಿಕಾಂಡ 13 : 11 (IRVKN)
ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
ಆದಿಕಾಂಡ 13 : 12 (IRVKN)
ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
ಆದಿಕಾಂಡ 13 : 13 (IRVKN)
ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. [PS]
ಆದಿಕಾಂಡ 13 : 14 (IRVKN)
{ಅಬ್ರಾಮನು ಹೆಬ್ರೋನಿಗೆ ಬಂದದ್ದು} [PS] ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
ಆದಿಕಾಂಡ 13 : 15 (IRVKN)
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಆದಿಕಾಂಡ 13 : 16 (IRVKN)
ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
ಆದಿಕಾಂಡ 13 : 17 (IRVKN)
ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. [PE][PS]
ಆದಿಕಾಂಡ 13 : 18 (IRVKN)
ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. [PE]

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: