ಆದಿಕಾಂಡ 15 : 1 (IRVKN)
{ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು} [PS] ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” [PE][PS]
ಆದಿಕಾಂಡ 15 : 2 (IRVKN)
ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
ಆದಿಕಾಂಡ 15 : 3 (IRVKN)
ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. [PE][PS]
ಆದಿಕಾಂಡ 15 : 4 (IRVKN)
ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
ಆದಿಕಾಂಡ 15 : 5 (IRVKN)
“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. [PE][PS]
ಆದಿಕಾಂಡ 15 : 6 (IRVKN)
ಅಬ್ರಾಮನು ಯೆಹೋವನನ್ನು ನಂಬಿದನು; [* ಗಲಾತ್ಯ. 3:6, ರೋಮಾ. 4:3, ಯಾಕೋಬ 3:26.] ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು. [PE][PS]
ಆದಿಕಾಂಡ 15 : 7 (IRVKN)
ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. [PE][PS]
ಆದಿಕಾಂಡ 15 : 8 (IRVKN)
“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. [PE][PS]
ಆದಿಕಾಂಡ 15 : 9 (IRVKN)
ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. [PE][PS]
ಆದಿಕಾಂಡ 15 : 10 (IRVKN)
ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
ಆದಿಕಾಂಡ 15 : 11 (IRVKN)
ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. [PE][PS]
ಆದಿಕಾಂಡ 15 : 12 (IRVKN)
ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
ಆದಿಕಾಂಡ 15 : 13 (IRVKN)
ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
ಆದಿಕಾಂಡ 15 : 14 (IRVKN)
ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
ಆದಿಕಾಂಡ 15 : 15 (IRVKN)
ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
ಆದಿಕಾಂಡ 15 : 16 (IRVKN)
ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. [PE][PS]
ಆದಿಕಾಂಡ 15 : 17 (IRVKN)
ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. [PE][PS]
ಆದಿಕಾಂಡ 15 : 18 (IRVKN)
ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
ಆದಿಕಾಂಡ 15 : 19 (IRVKN)
ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,
ಆದಿಕಾಂಡ 15 : 20 (IRVKN)
ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
ಆದಿಕಾಂಡ 15 : 21 (IRVKN)
ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: