ಆದಿಕಾಂಡ 16 : 1 (IRVKN)
{ಇಷ್ಮಾಯೇಲನ ಜನನ} [PS] ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
ಆದಿಕಾಂಡ 16 : 2 (IRVKN)
ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
ಆದಿಕಾಂಡ 16 : 3 (IRVKN)
ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. [PE][PS]
ಆದಿಕಾಂಡ 16 : 4 (IRVKN)
ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.
ಆದಿಕಾಂಡ 16 : 5 (IRVKN)
ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. [PE][PS]
ಆದಿಕಾಂಡ 16 : 6 (IRVKN)
ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. [PE][PS]
ಆದಿಕಾಂಡ 16 : 7 (IRVKN)
ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
ಆದಿಕಾಂಡ 16 : 8 (IRVKN)
“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. [PE][PS]
ಆದಿಕಾಂಡ 16 : 9 (IRVKN)
ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
ಆದಿಕಾಂಡ 16 : 10 (IRVKN)
ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
ಆದಿಕಾಂಡ 16 : 11 (IRVKN)
ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ [* ದೇವರು ಕೇಳುವನು ] ಇಷ್ಮಾಯೇಲ್ ಎಂದು ಹೆಸರಿಡಬೇಕು.
ಆದಿಕಾಂಡ 16 : 12 (IRVKN)
ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ [† ಅಥವಾ ಅವನು ಅವನ ಸಂಬಂಧಿಕರ ಪೂರ್ವದಿಕ್ಕಿನಲ್ಲಿ ವಾಸಿಸುವವನು.] ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು. [PE][PS]
ಆದಿಕಾಂಡ 16 : 13 (IRVKN)
ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ [‡ ಎಲ್ ರೋಹಿ.] ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
ಆದಿಕಾಂಡ 16 : 14 (IRVKN)
ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ [§ ನನ್ನನ್ನು ನೋಡುವ ಜೀವಸ್ವರೂಪನಾದ ದೇವರ ಬಾವಿ.] ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. [PE][PS]
ಆದಿಕಾಂಡ 16 : 15 (IRVKN)
ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.
ಆದಿಕಾಂಡ 16 : 16 (IRVKN)
ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು. [PE]
❮
❯