ಆದಿಕಾಂಡ 19 : 1 (IRVKN)
ಸೊದೋಮ್ ಗೊಮೋರ ಪಟ್ಟಣಗಳ ನಾಶನ ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
ಆದಿಕಾಂಡ 19 : 2 (IRVKN)
“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
ಆದಿಕಾಂಡ 19 : 3 (IRVKN)
ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
ಆದಿಕಾಂಡ 19 : 4 (IRVKN)
ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
ಆದಿಕಾಂಡ 19 : 5 (IRVKN)
ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
ಆದಿಕಾಂಡ 19 : 6 (IRVKN)
ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,
ಆದಿಕಾಂಡ 19 : 7 (IRVKN)
“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
ಆದಿಕಾಂಡ 19 : 8 (IRVKN)
ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.
ಆದಿಕಾಂಡ 19 : 9 (IRVKN)
ಆದಿಕಾಂಡ 19 : 10 (IRVKN)
ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.
ಆದಿಕಾಂಡ 19 : 11 (IRVKN)
ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
ಆದಿಕಾಂಡ 19 : 12 (IRVKN)
ಲೋಟನನ್ನು ಸೊದೋಮಿನಿಂದ ಹೊರಬಂದದ್ದು ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
ಆದಿಕಾಂಡ 19 : 13 (IRVKN)
ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
ಆದಿಕಾಂಡ 19 : 14 (IRVKN)
ಆದಿಕಾಂಡ 19 : 15 (IRVKN)
ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
ಆದಿಕಾಂಡ 19 : 16 (IRVKN)
ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
ಆದಿಕಾಂಡ 19 : 17 (IRVKN)
ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
ಆದಿಕಾಂಡ 19 : 18 (IRVKN)
ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;
ಆದಿಕಾಂಡ 19 : 19 (IRVKN)
ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
ಆದಿಕಾಂಡ 19 : 20 (IRVKN)
ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
ಆದಿಕಾಂಡ 19 : 21 (IRVKN)
ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
ಆದಿಕಾಂಡ 19 : 22 (IRVKN)
ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ * ಚಿಕ್ಕ ಊರು. ಚೋಗರ್ ಎಂದು ಹೆಸರಾಯಿತು.
ಆದಿಕಾಂಡ 19 : 23 (IRVKN)
ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.
ಆದಿಕಾಂಡ 19 : 24 (IRVKN)
ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
ಆದಿಕಾಂಡ 19 : 25 (IRVKN)
ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
ಆದಿಕಾಂಡ 19 : 26 (IRVKN)
ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
ಆದಿಕಾಂಡ 19 : 27 (IRVKN)
ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
ಆದಿಕಾಂಡ 19 : 28 (IRVKN)
ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
ಆದಿಕಾಂಡ 19 : 29 (IRVKN)
ಆದಿಕಾಂಡ 19 : 30 (IRVKN)
ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. ಲೋಟನು ಮತ್ತು ಅವನ ಹೆಣ್ಣುಮಕ್ಕಳು ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
ಆದಿಕಾಂಡ 19 : 31 (IRVKN)
ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
ಆದಿಕಾಂಡ 19 : 32 (IRVKN)
ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
ಆದಿಕಾಂಡ 19 : 33 (IRVKN)
ಆದಿಕಾಂಡ 19 : 34 (IRVKN)
ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
ಆದಿಕಾಂಡ 19 : 35 (IRVKN)
ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
ಆದಿಕಾಂಡ 19 : 36 (IRVKN)
ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.
ಆದಿಕಾಂಡ 19 : 37 (IRVKN)
ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
ಆದಿಕಾಂಡ 19 : 38 (IRVKN)
ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38