ಆದಿಕಾಂಡ 23 : 1 (IRVKN)
{ಸಾರಳ ಮರಣ ಮತ್ತು ಸಮಾಧಿ} [PS] ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು.
ಆದಿಕಾಂಡ 23 : 2 (IRVKN)
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
ಆದಿಕಾಂಡ 23 : 3 (IRVKN)
ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,
ಆದಿಕಾಂಡ 23 : 4 (IRVKN)
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು. [PE][PS]
ಆದಿಕಾಂಡ 23 : 5 (IRVKN)
ಹಿತ್ತಿಯರು ಅಬ್ರಹಾಮನಿಗೆ,
ಆದಿಕಾಂಡ 23 : 6 (IRVKN)
“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
ಆದಿಕಾಂಡ 23 : 7 (IRVKN)
ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.
ಆದಿಕಾಂಡ 23 : 8 (IRVKN)
ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,
ಆದಿಕಾಂಡ 23 : 9 (IRVKN)
ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
ಆದಿಕಾಂಡ 23 : 10 (IRVKN)
ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,
ಆದಿಕಾಂಡ 23 : 11 (IRVKN)
“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
ಆದಿಕಾಂಡ 23 : 12 (IRVKN)
ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ
ಆದಿಕಾಂಡ 23 : 13 (IRVKN)
ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.
ಆದಿಕಾಂಡ 23 : 14 (IRVKN)
ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,
ಆದಿಕಾಂಡ 23 : 15 (IRVKN)
“ಸ್ವಾಮಿ, ನನ್ನ ಮಾತನ್ನು ಲಾಲಿಸು; [* ಸುಮಾರು ನಾಲ್ಕುವರೆ ಕಿಲೋಗ್ರಾಂ.] ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
ಆದಿಕಾಂಡ 23 : 16 (IRVKN)
ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
ಆದಿಕಾಂಡ 23 : 17 (IRVKN)
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
ಆದಿಕಾಂಡ 23 : 18 (IRVKN)
ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
ಆದಿಕಾಂಡ 23 : 19 (IRVKN)
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
ಆದಿಕಾಂಡ 23 : 20 (IRVKN)
ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು. [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: