ಆದಿಕಾಂಡ 25 : 1 (IRVKN)
{ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು} (1ಪೂರ್ವ 1:32-33) [PS] ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
ಆದಿಕಾಂಡ 25 : 2 (IRVKN)
ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
ಆದಿಕಾಂಡ 25 : 3 (IRVKN)
ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
ಆದಿಕಾಂಡ 25 : 4 (IRVKN)
ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. [PE][PS]
ಆದಿಕಾಂಡ 25 : 5 (IRVKN)
ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
ಆದಿಕಾಂಡ 25 : 6 (IRVKN)
ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. [PS]
ಆದಿಕಾಂಡ 25 : 7 (IRVKN)
{ಅಬ್ರಹಾಮನ ಮರಣ ಮತ್ತು ಸಮಾಧಿ} [PS] ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
ಆದಿಕಾಂಡ 25 : 8 (IRVKN)
ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
ಆದಿಕಾಂಡ 25 : 9 (IRVKN)
ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
ಆದಿಕಾಂಡ 25 : 10 (IRVKN)
ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
ಆದಿಕಾಂಡ 25 : 11 (IRVKN)
ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು. [PS]
ಆದಿಕಾಂಡ 25 : 12 (IRVKN)
{ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು} [PS] ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. [PE][PS]
ಆದಿಕಾಂಡ 25 : 13 (IRVKN)
ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
ಆದಿಕಾಂಡ 25 : 14 (IRVKN)
ಮಿಷ್ಮಾ, ದೂಮಾ, ಮಸ್ಸಾ,
ಆದಿಕಾಂಡ 25 : 15 (IRVKN)
ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
ಆದಿಕಾಂಡ 25 : 16 (IRVKN)
ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. [PE][PS]
ಆದಿಕಾಂಡ 25 : 17 (IRVKN)
ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
ಆದಿಕಾಂಡ 25 : 18 (IRVKN)
ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ [* ಪೂರ್ವದಿಕ್ಕಿನಲ್ಲಿ ವಾಸಿಸಿದರು.] ಎದುರಾಗಿ ವಾಸಿಸಿದರು. [PS]
ಆದಿಕಾಂಡ 25 : 19 (IRVKN)
{ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು} [PS] ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
ಆದಿಕಾಂಡ 25 : 20 (IRVKN)
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. [PE][PS]
ಆದಿಕಾಂಡ 25 : 21 (IRVKN)
ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
ಆದಿಕಾಂಡ 25 : 22 (IRVKN)
ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. [PE][PS]
ಆದಿಕಾಂಡ 25 : 23 (IRVKN)
ಯೆಹೋವನು ಆಕೆಗೆ, [QBR] “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; [QBR] ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; [QBR] ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; [QBR] ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. [PE][PS]
ಆದಿಕಾಂಡ 25 : 24 (IRVKN)
ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
ಆದಿಕಾಂಡ 25 : 25 (IRVKN)
ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ [† ಮೈತುಂಬಾ ರೋಮವುಳ್ಳವನು.] ಏಸಾವ” ಎಂದು ಹೆಸರಿಟ್ಟರು.
ಆದಿಕಾಂಡ 25 : 26 (IRVKN)
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. [PS]
ಆದಿಕಾಂಡ 25 : 27 (IRVKN)
{ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು} [PS] ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
ಆದಿಕಾಂಡ 25 : 28 (IRVKN)
ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. [PE][PS]
ಆದಿಕಾಂಡ 25 : 29 (IRVKN)
ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
ಆದಿಕಾಂಡ 25 : 30 (IRVKN)
ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. [PE][PS]
ಆದಿಕಾಂಡ 25 : 31 (IRVKN)
ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು. [PE][PS]
ಆದಿಕಾಂಡ 25 : 32 (IRVKN)
ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. [PE][PS]
ಆದಿಕಾಂಡ 25 : 33 (IRVKN)
ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. [PE][PS]
ಆದಿಕಾಂಡ 25 : 34 (IRVKN)
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: