ಆದಿಕಾಂಡ 26 : 1 (IRVKN)
{ಇಸಾಕನು ಗೆರಾರಿನಲ್ಲಿ} [PS] ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
ಆದಿಕಾಂಡ 26 : 2 (IRVKN)
ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
ಆದಿಕಾಂಡ 26 : 3 (IRVKN)
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
ಆದಿಕಾಂಡ 26 : 4 (IRVKN)
ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
ಆದಿಕಾಂಡ 26 : 5 (IRVKN)
ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. [PS]
ಆದಿಕಾಂಡ 26 : 6 (IRVKN)
{ಇಸಾಕನು ಹೆಂಡತಿಯನ್ನು ತಂಗಿಯೆಂದು ಹೇಳಿದ್ದು} [PS] ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
ಆದಿಕಾಂಡ 26 : 7 (IRVKN)
ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. [PE][PS]
ಆದಿಕಾಂಡ 26 : 8 (IRVKN)
ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
ಆದಿಕಾಂಡ 26 : 9 (IRVKN)
ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು. [PE][PS]
ಆದಿಕಾಂಡ 26 : 10 (IRVKN)
ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” [PE][PS]
ಆದಿಕಾಂಡ 26 : 11 (IRVKN)
ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. [PS]
ಆದಿಕಾಂಡ 26 : 12 (IRVKN)
{ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು} [PS] ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
ಆದಿಕಾಂಡ 26 : 13 (IRVKN)
ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.
ಆದಿಕಾಂಡ 26 : 14 (IRVKN)
ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
ಆದಿಕಾಂಡ 26 : 15 (IRVKN)
ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. [PE][PS]
ಆದಿಕಾಂಡ 26 : 16 (IRVKN)
ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;
ಆದಿಕಾಂಡ 26 : 17 (IRVKN)
ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
ಆದಿಕಾಂಡ 26 : 18 (IRVKN)
ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. [PE][PS]
ಆದಿಕಾಂಡ 26 : 19 (IRVKN)
ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.
ಆದಿಕಾಂಡ 26 : 20 (IRVKN)
ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ [* ಅಂದರೆ ಜಗಳ.] ಏಸೆಕ್” ಎಂದು ಹೆಸರಿಟ್ಟನು.
ಆದಿಕಾಂಡ 26 : 21 (IRVKN)
ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ [† ಅಂದರೆ ವಿರೋಧಿಗಳಾವುದು.] ಸಿಟ್ನಾ” ಎಂದು ಹೆಸರಿಟ್ಟನು.
ಆದಿಕಾಂಡ 26 : 22 (IRVKN)
ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ [‡ ಅಂದರೆ ವಿಶಾಲ ಸ್ಥಳ.] ರೆಹೋಬೋತ್” ಎಂದು ಹೆಸರಿಟ್ಟನು. [PS]
ಆದಿಕಾಂಡ 26 : 23 (IRVKN)
{ಇಸಾಕನ ಮತ್ತು ಅಬೀಮೆಲೆಕನ ಒಡಂಬಡಿಕೆ} [PS] ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.
ಆದಿಕಾಂಡ 26 : 24 (IRVKN)
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು. [PE][PS]
ಆದಿಕಾಂಡ 26 : 25 (IRVKN)
ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು. [PE][PS]
ಆದಿಕಾಂಡ 26 : 26 (IRVKN)
ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. [PE][PS]
ಆದಿಕಾಂಡ 26 : 27 (IRVKN)
ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,
ಆದಿಕಾಂಡ 26 : 28 (IRVKN)
“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
ಆದಿಕಾಂಡ 26 : 29 (IRVKN)
ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. [PE][PS]
ಆದಿಕಾಂಡ 26 : 30 (IRVKN)
ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
ಆದಿಕಾಂಡ 26 : 31 (IRVKN)
ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು. [PE][PS]
ಆದಿಕಾಂಡ 26 : 32 (IRVKN)
ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
ಆದಿಕಾಂಡ 26 : 33 (IRVKN)
ಅವನು ಆ ಬಾವಿಗೆ “ [§ ಅಂದರೆ ಪ್ರಮಾಣ.] ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು. [PS]
ಆದಿಕಾಂಡ 26 : 34 (IRVKN)
{ಏಸಾವನು ಹಿತ್ತಿಯರಲ್ಲಿ ಹೆಣ್ಣನ್ನು ಮದುವೆಯಾದದ್ದು} [PS] ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
ಆದಿಕಾಂಡ 26 : 35 (IRVKN)
ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: